ವಿದ್ಯಾರ್ಥಿಗಳಿಂದ ಯಕ್ಷಕಲೆ ಬೆಳೆಯಲಿದೆ:ಮಂಗಳೂರಿನ ಎಸ್.ಡಿ. ಯಂ. ಲಾ ಕಾಲೇಜ್ ನಲ್ಲಿ ನಡೆದ ಅಂತರ ಕಾಲೇಜು ಯಕ್ಷಗಾನ ಸ್ಪರ್ಧೆ ಕಾರ್ಯಕ್ರಮದ ಸಮಾರಂಭದಲ್ಲಿ ಶ್ಯಾಮ್ ಭಟ್ ಅಭಿಪ್ರಾಯ.

94.4K Views 27 Feb 2024

ಮಂಗಳೂರು: ವಿದ್ಯಾವಂತ ಸಮಾಜ ಯಕ್ಷಗಾನ ಕ್ಷೇತ್ರದತ್ತ ಒಲವು ಹೊಂದಿರುವುದು ಉತ್ತಮ ವಿಚಾರ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಲೆ ಉಳಿಸಲು ಮುಂದಾಗಿರುವುದು. ಅವುಗಳ ಶ್ರೀಮಂತಿಕೆಯನ್ನು ವಿವರಿಸುತ್ತಿದ್ದು, ವಿದ್ಯಾರ್ಥಿಗಳ ಕಲಾ ಜೀವನ ಯಶಸ್ವಿಯಾಗಲಿ ಎಂದು ಕರ್ನಾಟಕ ಸರಕಾರದ ಮಾನವ ಹಕ್ಕುಗಳ ಆಯೋಗದ ಆಡಳಿತಾತ್ಮಕ ಸದಸ್ಯ ಶ್ಯಾಮ್ ಭಟ್ ತಿಳಿಸಿದರು.
ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಲಾದ 32 ನೇ ವರ್ಷದ ಯಕ್ಷೋತ್ಸವ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯ ಸಮಾರೋಪದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಹಿಂದಿನ ಕಾಲದಲ್ಲಿ ವಿದ್ಯಾಭ್ಯಾಸ ಮುಂದುವರಿಸಲಾಗದವರು ಯಕ್ಷಗಾನ ಕ್ಷೇತ್ರವನ್ನು ಆಯ್ಕೆ ಮಾಡುತ್ತಿದ್ದರು. ಆದರೆ,ಇಂದು ಚಿತ್ರಣವೇ ಬದಲಾಗಿದ್ದು, ವಿದ್ಯಾವಂತರು ಯಕ್ಷಗಾನದಲ್ಲಿ ಹೆಚ್ಚು ಭಾಗವಹಿಸುತ್ತಿರುವುದು ಕಲೆಯ ಬೆಳವಣಿಗೆಗೆ ಪೂರಕ. ಮೂವತ್ತೆರಡು ವರ್ಷಗಳ ಹಿಂದೆಯೇ ಯಕ್ಷಗಾನ ಸ್ಪರ್ಧೆಯನ್ನು ಆರಂಭಿಸಿರುವುದು ಸಂಸ್ಥೆಗೆ ಹಿರಿಮೆ ತಂದಿದೆ. ಎಲ್ಲ ತಂಡಗಳು ಒಂದೇ ಪ್ರಸಂಗವನ್ನು ಪ್ರದರ್ಶಿಸಿರುವ ಕಾರಣ ತೀರ್ಪುಗಾರಿಕೆಗೆ ನೆರವಾಗಿದೆ. ಶಾಲಾ ಕಾಲೇಜುಗಳಲ್ಲಿ ಯಕ್ಷಗಾನ ಕಲಿಯುವುದು ಕಲೆಯತ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿತರಾಗಲು ಕಾರಣವಾಗುತ್ತದೆ. ಉದ್ಯೋಗದ ಬಗ್ಗೆ ಹೆಚ್ಚು ಚಿಂತಿಸದೆ ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವುದರಿಂದ ಗೌರವ, ಗುರುತಿಸುವಿಕೆಯ ಜೀವನ ನಡೆಸಲು ಸಾಧ್ಯ ಎಂದರು.

ಸಮ್ಮಾನ
ತೀರ್ಪುಗಾರರಾದ ಎಂ.ಕೆ. ಆಚಾರ್ಯ, ಅಂಬಾ ಪ್ರಸಾದ್, ಶ್ಯಾಮ್ ಭಟ್ ಅವರನ್ನು ಸಮ್ಮಾನಿಸಲಾಯಿತು. ಪ್ರಾಂಶುಪಾಲ ಡಾ. ತಾರಾನಾಥ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ದೇವರಾಜ ಟಿ., ಯಕ್ಷೋತ್ಸವ ಸಂಚಾಲಕ ಪುಷ್ಪರಾಜ್ ಕೆ. ಶುಭ ಹಾರೈಸಿದರು.

ಬಹುಮಾನ ವಿತರಣೆ
ಸಮಾರೋಪದಲ್ಲಿ ಪ್ರಶಸ್ತಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ನಿಟ್ಟೆ ಎನ್‌ಎಂಎಎಂ ಟೆಕ್ನಾಲಜಿ ಸಂಸ್ಥೆ ಪ್ರಥಮ ಸಮಗ್ರ ಪ್ರಶಸ್ತಿ ಗೆದ್ದು ಕೊಂಡಿತ್ತು. ಎಸ್‌ಡಿಎಂ ಉಜಿರೆ ಕಾಲೇಜು ದ್ವಿತೀಯ, ಉಡುಪಿ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ಸಂಸ್ಥೆ ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿತು.
ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಥಮ ದರ್ಜೆ ಕಾಲೇಜು ತಂಡ ನಾಲ್ಕು ಹಾಗೂ ಮಂಗಳೂರಿನ ಎಸ್‌ಡಿಎಂ ಉದ್ಯಮಾಡಳಿತ ಕಾಲೇಜು ತಂಡ ಐದನೇ ಸ್ಥಾನ ಪಡೆದುಕೊಂಡಿತು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top