ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಗೌರವಾಧ್ಯಕ್ಷತೆಯಲ್ಲಿ ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳದ ವತಿಯಿಂದ ಮಾರ್ಚ್ 2 ರ ಶನಿವಾರದಂದು 13 ನೇ ವರ್ಷದ ಹೊನಲು ಬೆಳಕಿನ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳ (ಬಂಟ್ವಾಳ ಕಂಬಳ)ಕ್ಕೆ ಅದ್ಧೂರಿ ಚಾಲನೆ

92.7K Views 2 Mar 2024

ಮಂಗಳೂರು: ತುಳುನಾಡಿನ ಪುರಾತನ ಜಾನಪದ ಕ್ರೀಡಾಲೋಕದಲ್ಲಿ ಹೊಸ ಚರಿತ್ರೆಯನ್ನು ಬರೆದ ಬಂಟ್ವಾಳದ 13 ನೇ ವರ್ಷದ ಹೊನಲು ಬೆಳಕಿನ ಮೂಡೂರು-ಪಡೂರು ಜೋಡುಕರೆ ಕಂಬಳ (ಬಂಟ್ವಾಳ ಕಂಬಳ)ವನ್ನು ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಅವರು ಉದ್ಘಾಟಿಸಿ,ಚಾಲನೆ ನೀಡಿದರು. ಈ ಸಂದರ್ಭ ಹೊಸ ಆವಿಷ್ಕಾರದ ಕಾವಳಕಟ್ಟೆ ಕಂಬಳ ವೈಭವವನ್ನು ನಾವೂರು ಕಂಬಳದ ಮೂಲಕ ಮತ್ತೆ ಕಾಣುವಂತಾಗಿದೆ. ಈ ಭಾಗದ ರೈತಾಪಿ ವರ್ಗದ ಸಹಕಾರದಿಂದ ಇದು ಸಾಧ್ಯವಾಯಿತ್ತು ಎoದು ಅವರು ನುಡಿದರು.


ಅಲ್ಲಿಪಾದೆ ಸಂತ ಅಂತೋನಿ ಚರ್ಚ್ನ ಧರ್ಮಗುರು ರೆ| ಫಾ| ಫೆಡ್ರಿಕ್ ಮೊಂತೆರೊ ಅವರು ದೀಪ ಬೆಳಗಿಸಿದರು. ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಭಹಾರೈಸಿದರು.


ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಂಬಳ ಕೋಣಗಳ ಯಜಮಾನರಾದ ಉಮೇಶ್ ಶೆಟ್ಟಿ ಮಾಣಿಸಾಗು, ಲಿಯೋ ಫೆರ್ನಾಂಡೀಸ್ ಸರಪಾಡಿ, ಪುರುಷೋತ್ತಮ ಶೆಟ್ಟಿ, ಐತಪ್ಪ ಆಳ್ವ, ಎಂಆರ್‌ಜಿ ಗ್ರೂಪ್‌ನ ಬಾಲಕೃಷ್ಣ ಶೆಟ್ಟಿ, ತಾ.ಪಂ.ಮಾಜಿ ಸದಸ್ಯ ಪ್ರವೀಣ್ ಆಳ್ವ, ಉದ್ಯಮಿಗಳಾದ ರಘುನಾಥ ಸೋಮಯಾಜಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮಾಜಿ ಮೇಯರ್ ಎಂ. ಶಶಿಧರ್ ಹೆಗ್ಡೆ, ನಮ್ಮ ಕುಡ್ಲದ ವ್ಯವಸ್ಥಾಪಕ ಲೀಲಾಕ್ಷ ಕರ್ಕೇರ, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್. ಖಾದರ್, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಆಲಿ, ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ನಾರಾಯಣ ನಾಯ್ಕ್, ಸೇವಾದಳದ ಅಧ್ಯಕ್ಷ ಜೋಕಿಂ ಡಿಸೋಜ ಪುತ್ತೂರು, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಯಪ್ರಕಾಶ್ ರೈ, ಕಂಬಳ ಸಮಿತಿಯ ಸಂಚಾಲಕ ಬಿ. ಪದ್ಮಶೇಖರ್ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಕೋಶಾಧಿಕಾರಿ ಪಿಲಿಫ್ ಫ್ರಾಂಕ್, ಉಪಾಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಅವಿಲ್ ಮಿನೇಜಸ್, ಬೇಬಿ ಕುಂದರ್, ಸುದೀಪ್‌ಕುಮಾರ್ ಶೆಟ್ಟಿ, ಎಂ.ಎಸ್. ಮಹಮ್ಮದ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು. ಅಪಾರ ಪ್ರೇಕ್ಷಕ ವರ್ಗ ಕಂಬಳಕ್ಕೆ ಆಗಮಿಸಿ ಇತಿಹಾಸ ಪ್ರಸಿದ್ಧ ಬಂಟ್ವಾಳ ಕಂಬಳವನ್ನು ವೀಕ್ಷಿಸಿದರು.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top