3 ಲಕ್ಷಕ್ಕೂ ಅಧಿಕ ಮತಗಳಿಂದ ಬಿಜೆಪಿಯಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ಗೆಲ್ಲಲಿದ್ದಾರೆ ಎಂದ ಕೃಷ್ಣ ಪಾಲೆಮಾರ್. ಬಿಜೆಪಿ ಪಾಳಯದಲ್ಲಿ ಅರುಣ್ ಪುತ್ತಿಲ ಸೇರಿದಂತೆ ಪ್ರಮುಖ ನಾಯಕರು ಚೌಟ ಪರ ಬ್ಯಾಟಿಂಗ್.

104.2K Views 15 Mar 2024

ಮಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬೃಜೇಶ್ ಚೌಟ ಆಯ್ಕೆಯಾಗಿರುವುದು ಬಿಜೆಪಿ ಪಾಳಯದಲ್ಲಿ ಹೊಸ ಉಲ್ಲಾಸ, ಉತ್ಸಾಹದ ಜೊತೆಗೆ ಹೊಸ ಅಲೆ ಎಬ್ಬಿಸಿದೆ. ಬೃಜೇಶ್ ಚೌಟ ಅವರು 3 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲಲಿದ್ದಾರೆ. ಅವರನ್ನು ಗೆಲ್ಲಿಸಿ ಕೊಡುತ್ತೇವೆಂದು ಮಾಜಿ ಸಚಿವ ಕೃಷ್ಣ ಪಾಲೆಮಾರ್ ಅವರು ಹೇಳಿದ್ದಾರೆ.


ತನಗೆ ಟಿಕೇಟ್ ಸಿಗದಿದ್ದರೂ, ಆ ಬಗ್ಗೆ ತಲೆಕೆಡಿಸಿಕೊಳ್ಳದ ನಳಿನ್‌ಕುಮಾರ್ ಕಟೀಲ್ ಅವರು ತಾನು ಬೃಜೇಶ್ ಚೌಟರ ಗೆಲುವಿಗಾಗಿ ಶಕ್ತಿಮೀರಿ ಶ್ರಮಿಸುವುದಾಗಿ ನುಡಿದಿದ್ದಾರೆ. ಈ ಹಿಂದೆ ತಾನು ಬಂಡಾಯ ಏಳುತ್ತೇನೆಂದು ಸಾರಿದ್ದ ಅರುಣ್ ಪುತ್ತಿಲ ಅವರು ಮಂಗಳೂರಿನಲ್ಲಿ ಬಿಜೆಪಿ ಪಕ್ಷವನ್ನು ಅಧಿಕೃತವಾಗಿ ಸೇರಿ ಬೃಜೇಶ್ ಚೌಟ ಗೆಲುವಿಗಾಗಿ ದುಡಿಯುವುದಾಗಿ ಘೋಷಿಸಿದ್ದಾರೆ. ಒಟ್ಟಿನಲ್ಲಿ ಮಂಗಳೂರಲ್ಲಿ ಬೃಜೇಶ್ ಚೌಟರ ಪರ ಜನ ಅಲೆ ಎದ್ದಿದ್ದು ಪ್ರತಿಸ್ಪರ್ಧಿ ಕಾಂಗ್ರೆಸ್‌ನಲ್ಲಿ ಪದ್ಮರಾಜ್ ಆರ್. ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುವ ಸುದ್ಧಿ ಇದೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top