ದ.ಕ. ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ  ನಾಳೆ ಉದ್ಘಾಟನೆ.

107.5K Views 25 Mar 2024

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಚುನಾವಣಾ ಪ್ರಚಾರ ಕಚೇರಿಯನ್ನು ನಾಳೆ (ಮಾ.26) ಬೆಳಗ್ಗೆ 9.30ಕ್ಕೆ ಕೇಂದ್ರದ ಮಾಜಿ ಸಚಿವ, ಕೆಪಿಸಿಸಿ ಮಾಜಿ ಅಧ್ಯಕ್ಷ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ.


ನಗರದ ಎಂ.ಜಿ. ರಸ್ತೆಯ ಲಾಲ್‌ಬಾಗ್‌ನಿಂದ (ಮಹಾನಗರಪಾಲಿಕೆ ಕಟ್ಟಡದ ಬಲಭಾಗದ ರಸ್ತೆ) ಮಣ್ಣಗುಡ್ಡೆಗೆ ತೆರಳುವ ರಸ್ತೆ ಸಮೀಪ ನೂತನ ಚುನಾವಣಾ ಕಚೇರಿಯನ್ನು ಆರಂಭಿಸಲು ನಿರ್ಧರಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಶಾಸಕರಾದ ಅಶೋಕ್ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ,ಕೆಪಿಸಿಸಿ ಉಪಾಧ್ಯಕ್ಷರಾದ ಐವನ್ ಡಿಸೋಜ, ಅಭಯಚಂದ್ರಜೈನ್, ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮಾಜಿ ಶಾಸಕರಾದ ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಪೊರೇಟರ್ ಗಳು, ಬ್ಲಾಕ್ ಕಾಂಗ್ರೆಸ್, ಎನ್‌ಎಸ್‌ಯುಐ, ಸೇವಾದಳ ಸೇರಿದಂತೆ ನಾನಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top