ಕುದ್ರೋಳಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಚಾಲನೆ. ಅಭ್ಯರ್ಥಿ ಪದ್ಮರಾಜ್ ಆರ್. ಗೆಲುವಿಗೆ ಕೈಜೋಡಿಸಿದ ಕಾಂಗ್ರೆಸ್ ಮುಖಂಡರು

104.8K Views 26 Mar 2024

ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಯಿತು.
ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಕಾಂಗ್ರೆಸ್ ಧ್ವಜವನ್ನು ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಹಸ್ತಾಂತರಿಸುವ ಮೂಲಕ ಚುನಾವಣಾ ಆರಂಭಗೊಂಡಿತು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಗೆಲುವಿಗೆ ಶುಭಹಾರೈಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top