ಎ. 3ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ.

94.2K Views 1 Apr 2024

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಎ. 3ಕ್ಕೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಕ್ಷೇತ್ರದ ಉಸ್ತುವಾರಿ ಕೆ.ಜೆ. ಜಾರ್ಜ್ ಸಹಿತ ಇತರ ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಂದು ಬೆಳಗ್ಗೆ 11ಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಸಣ್ಣ ಸಭೆ ನಡೆಸಿ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ನಡೆಯಲಿದೆ. ಎ. 6ರಂದು ನಡೆಸಲು ಉದ್ದೇಶಿಸಿರುವ ಸಾರ್ವತ್ರಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗ ವಹಿಸುವ ಸಾಧ್ಯತೆಗಳಿದ್ದು ಎಲ್ಲ ರೀತಿಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಉಡುಪಿಯಲ್ಲಿ ತಿಳಿಸಿದ್ದಾರೆ.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top