ಸಂಸದ ನಳಿನ್‌ಕುಮಾರ್ ಕಟೀಲು ಅವರಿಗೆ ಜನಸೇವಾ ರಾಷ್ಟ್ರೀಯ ಪ್ರಶಸ್ತಿ.13ನೇ ಸೌಹಾರ್ದ ಸಂಗಮದಲ್ಲಿ ಪ್ರಶಸ್ತಿ ಪ್ರದಾನ.

92.3K Views 21 May 2024

ಮಂಗಳೂರು: ದಕ್ಷಿಣ ಕನ್ನಡ ಸಂಸದ ನಳಿನ್‌ಕುಮಾರ್ ಕಟೀಲು ಅವರನ್ನು ಜನಸೇವಾ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸತತ ಮೂರು ಬಾರಿ ದಕ್ಷಿಣ ಕನ್ನಡದ ಎಂಪಿಯಾಗಿ ಒಂದು ಲಕ್ಷಕ್ಕೂ ಅಧಿಕ ಕೋಟಿ ರೂಪಾಯಿಗಳ ಅನುದಾನವನ್ನು ಕೇಂದ್ರದಿಂದ ತಂದು ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ನಳಿನ್‌ಕುಮಾರ್ ಕಟೀಲು ಅವರು ನೇರ ನಡೆ ನುಡಿಯ ನಿಷ್ಕಳಂಕ ವ್ಯಕ್ತಿತ್ವದ ಜನ ಮೆಚ್ಚಿದ ಜನನಾಯಕರಾಗಿದ್ದು, ಅವರ ನಿಷ್ಪಕ್ಷಪಾತೀಯ ಹಾಗೂ ಪ್ರಾಮಾಣಿಕ ಜನಸೇವೆಯನ್ನು ಪರಿಗಣಿಸಿ ಅವರನ್ನು ಜನಸೇವಾ ರಾಷ್ಟ್ರೀಯ ಪ್ರಶಸ್ತಿಗೆ ಅರ್ಹವಾಗಿ ಆಯ್ಕೆ ಮಾಡಲಾಗಿದೆ.
ಜನಸೇವಾ ರಾಷ್ಟ್ರೀಯ ಪ್ರಶಸ್ತಿಯನ್ನು Mp mla’s ನ್ಯೂಸ್ ಪತ್ರಿಕೆ ಮತ್ತು Mp mla’s news tv 24×7ನ್ಯೂಸ್ ಪೋರ್ಟಲ್ ಮಾಧ್ಯಮ ಸಂಸ್ಥೆಯು ಅಕ್ಟೋಬರ್ 13 ರಂದು ಮಂಗಳೂರು ಟೌನ್ ಹಾಲ್ ನಲ್ಲಿ ಆಯೋಜಿಸಿರುವ 13ನೇ ಸೌಹಾರ್ದ ಸಂಗಮದಲ್ಲಿ ಗಣ್ಯರ ಸಮ್ಮುಖದಲ್ಲಿ ಸಂಸದ ನಳಿನ್‌ಕುಮಾರ್ ಕಟೀಲ್ ಅವರಿಗೆ ಪ್ರದಾನ ಮಾಡಲಿದೆಂದು ಸೌಹಾರ್ದ ಸಂಗಮದ ಸಂಘಟಕ ಡಾ. ಅಶೋಕ್ ಶೆಟ್ಟಿ ಬಿ. ಎನ್ ತಿಳಿಸಿದ್ದಾರೆ

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top