ಶ್ರೀನಿಧಿ, ರಿಷಿಕಾಗೆ ಅನಂತ ಮಿತ್ರ ಕಲ್ಬಾವಿ ಯುವ ಸಾಧಕ ಪ್ರಶಸ್ತಿ

100.2K Views 21 May 2024

ಮಂಗಳೂರು: ಮಂಗಳೂರು ಸಿಟಿ ರೋಟರಿ ಕ್ಲಬ್ ನ ಅನಂತಮಿತ್ರ ಕಲ್ಬಾವಿ ಯುವ ಸಾಧಕ ಪ್ರಶಸ್ತಿಗೆ ( ಯಂಗ್ ಅಚೀವರ್ ಅವಾರ್ಡ್ಸ್) ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ ಮತ್ತು ಶಿಕ್ಷಣ ಅ್ಯಪ್ ಡೆವೆಲೆಪರ್ ಶ್ರೀನಿಧಿ ಆಯ್ಕೆಯಾಗಿದ್ದಾರೆ.
ಕೊಡಿಯಾಲಬೈಲ್ ಉತ್ಸವ ಹೋಟೇಲ್ ಸಭಾಂಗಣದಲ್ಲಿ ಮೇ 22 ರಂದು ರಾತ್ರಿ‌ 8 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ಪ್ರಶಸ್ತಿ ಪ್ರದಾನ ಮಾಡುವರು. ರೋಟರಿ ಅಧ್ಯಕ್ಷ ಪ್ರಶಾಂತ್ ರೈ, ಪ್ರಧಾನ ಕಾರ್ಯದರ್ಶಿ ಗಣೇಶ್, ಸ್ಥಾಪಕಾಧ್ಯಕ್ಷ ಡಾ.ರಂಜನ್ ಶೆಟ್ಟಿ ಉಪಸ್ಥಿತರಿರುವರು.
ಮೇ ತಿಂಗಳು ಯುವ ಸೇವಾ ಮಾಸ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ರಾಜೇಂದ್ರ ಕಲ್ಬಾವಿ ಅವರು ತಮ್ಮ ಹೆತ್ತವರಾದ ಅನಂತ ಕಲ್ಬಾವಿ ಸುಮಿತ್ರಾ ಕಲ್ಬಾವಿ ಹೆಸರಲ್ಲಿ ಪ್ರಶಸ್ತಿ ನಿಧಿ ಸ್ಥಾಪಿಸಿದ್ದರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top