ನಳಿನ್ ಕುಮಾರ್ ಕಟೀಲ್ ಅವರನ್ನು ಎಂಎಲ್ ಸಿ ಮಾಡಿ ವಿಧಾನ ಪರಿಷತ್ ನ ಪ್ರತಿಪಕ್ಷ ನಾಯಕನಾಗಿಸಲು ಬಿಜೆಪಿ ಮುಖಂಡರ ತೀರ್ಮಾನ. ಮೇ.30ರಂದು ನಿರ್ಧಾರ.

101.3K Views 25 May 2024

ಬೆಂಗಳೂರು : ಜೂನ್ 13 ರಂದು ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಲ್ಲಿ ಬಿಜೆಪಿಗೆ ಲಭಿಸಲಿರುವ 3 ಸ್ಥಾನಗಳಿಗೆ 44 ಆಕಾಂಕ್ಷಿಗಳಿದ್ದು,ಕೋರ್ ಕಮಿಟಿ 12 ಮಂದಿಯ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನೆ ಮಾಡಿದೆ.
ಇದರಲ್ಲಿ ದ.ಕ.ಸಂಸದರೂ ಆಗಿರುವ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರೂ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಜಾತಿವಾರು ಹಾಗೂ ಪ್ರದೇಶವಾರು ಆಧರಿಸಿ 12 ಮಂದಿಯ ಅಂತಿಮ ಪಟ್ಟಿ ತಯಾರು ಮಾಡಲಾಗಿದ್ದು ಈ ಪೈಕಿ ಮೂವರನ್ನು ಹೈಕಮಾಂಡ್ ಆಯ್ಕೆ ಮಾಡಲಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮೇ 22 ರಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು.ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಪಾಲ್ಗೊಂಡಿದ್ದರು.ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿಗೆ ಮೂರು ಸ್ಥಾನ ಸಿಕ್ಕಿದ್ದು, ಆ ಮೂರು ಸ್ಥಾನಕ್ಕೆ ಪಟ್ಟಿ ಸಿದ್ದಪಡಿಸುವ ಕುರಿತು ಆಕಾಂಕ್ಷಿಗಳ ಪಟ್ಟಿಯೊಂದಿಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಆಕಾಂಕ್ಷಿಗಳ ಪಟ್ಟಿಯಲ್ಲಿ ಇಲ್ಲದ ಹೆಸರುಗಳ ಬಗ್ಗೆಯೂ ಪ್ರಸ್ತಾಪಿಸಿ ಚರ್ಚೆ ನಡೆಸಲಾಗಿದೆ.

ಕಟೀಲ್‌ಗೆ ಪರಿಷತ್‌ನ ಪ್ರತಿಪಕ್ಷ ನಾಯಕ ಸ್ಥಾನ?: ಹಾಲಿ ಸಂಸದನಾಗಿರುವ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರದ ಅವಧಿ ಇನ್ನೇನು ಮುಗಿಯಲಿದೆ.ಈ ಬಾರಿ ಲೋಕಸಭೆಗೆ ಅವರಿಗೆ ಅವಕಾಶ ನೀಡಲಾಗಿಲ್ಲ. ಈ ನಿಟ್ಟಿನಲ್ಲಿ ಅವರನ್ನು ಪರಿಷತ್‌ ಸದಸ್ಯನಾಗಿ ಮಾಡುವ ಜೊತೆಗೆ ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಸ್ಥಾನ ನೀಡುವ ಕುರಿತು ಪಕ್ಷದ ಪ್ರಮುಖರು ತೀರ್ಮಾನಿಸಿದ್ದಾರೆ.ಪರಿಷತ್‌ನ ಪ್ರತಿಪಕ್ಷದ ನಾಯಕನಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರು ಈಗಾಗಲೇ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದಾರೆ. ಪ್ರಮುಖರ ಪಟ್ಟಿಯಲ್ಲಿ: ಸದ್ಯ ರಾಜ್ಯ ಬಿಜೆಪಿ ಸಿದ್ಧಪಡಿಸಿರುವ 12 ಜನರ ಪಟ್ಟಿಯಲ್ಲಿ ನಳಿನ್ ಕುಮಾರ್ ಕಟೀಲ್‌, ಸಿ.ಟಿ.ರವಿ, ಎನ್.ರವಿ ಕುಮಾರ್, ಬಿಜೆಪಿ ಮರಾಠ ಮುಖಂಡ ಮಾರುತಿ ರಾವ್‌ ಮೂಳೆ, ಬಿಜೆಪಿ ಮರಾಠ ನಾಯಕಿ ಧನಶ್ರೀ ಸರ್‌ದೇಸಾಯಿ, ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನಾ, ಹಾವೇರಿ ಬಿಜೆಪಿ ನಾಯಕ ಬೋಜರಾಜು ಪ್ರಮುಖರಾಗಿದ್ದಾರೆ.ಡಿ.ವಿ.ಸದಾನಂದ ಗೌಡರ ಹೆಸರು ಸೇರ್ಪಡೆಯಾಗಿದೆಯೇ ಎನ್ನುವ ಖಚಿತ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಬಿಜೆಪಿ ಹೈಕಮಾಂಡ್ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದು ಮೇ 30 ರ ನಂತರವಷ್ಟೇ ರಾಜ್ಯ ಬಿಜೆಪಿ ಕಳಿಸಿರುವ ಪಟ್ಟಿ ಬಗ್ಗೆ ಗಮನ ಹರಿಸಲಿದೆ ಮತ್ತು ಈ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top