ಅಂತಾರಾಷ್ಟ್ರೀಯ ಮುಟ್ಟಿನ ನೈಮರ್ಲ್ಯ ದಿನಾಚರಣೆ.

113.4K Views 3 Jun 2024

ಜೇವರ್ಗಿ: ಮೇ 29ರಂದು ಜೇವರ್ಗಿ ತಾಲ್ಲೂಕಿನ ಸಮುದಾಯ ಆರೋಗ್ಯ ಕೇಂದ್ರ, ನೆಲೋಗಿ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ಮಂದೇವಾಲ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿ ಆವರಣದಲ್ಲಿ ರಾಷ್ಟ್ರೀಯ ಕಿಶೋರ್ ಸ್ವಾಸ್ಥ್ಯ ಕಾರ್ಯಕ್ರಮ (RKSK) ದಡಿಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಪ್ರಯುಕ್ತ ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ದಿನಾಚರಣೆ ಹಮ್ಮಿಕೊಂಡಿತ್ತು.

ಸದರಿ ಕಾರ್ಯಕ್ರಮದಲ್ಲಿ ಮಂದೇವಾಲ್ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಮೇಶ್ ಗೌಡ ಪಾಟೀಲ್ ರವರ ಜೊತೆಗೆ ಆರೋಗ್ಯ ಸಿಬ್ಬಂದಿಗಳು ಮತ್ತು KHPT ಸಿಬ್ಬಂದಿಗಳು ಸ್ನೇಹ ಕ್ಲಿನಿಕ್ ಪೋಸ್ಟರಗಳನ್ನು ಬಿಡುಗಡೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಹದಿಹರೆಯದ ಹೆಣ್ಣು ಮಕ್ಕಳು ಕಾರ್ಯಕ್ರಮಕ್ಕೆ ಬಂದ ಅತಿಥಿ ಗಣ್ಯರಿಗೆ ಕೆಂಪು ಬಣ್ಣದ ರಿಬ್ಬನ್ ಕಟ್ಟುವುದರ ಮೂಲಕ ಸ್ವಾಗತಿಸಿದರು. ಮಂದೇವಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ.ರೇಣುಕಾದೇವಿ ದೇವರಮನಿರವರು ಹೆಣ್ಣು ಮಕ್ಕಳಲ್ಲಿ ಆಗುವ ಮಾಸಿಕ ಋತುಸ್ರಾವದ(ಮುಟ್ಟು) ಬಗ್ಗೆ ಕಿಶೋರಿಯರಿಗೆ ಚರ್ಚೆ ಮೂಲಕ ಸಮಗ್ರ ಮಾಹಿತಿ ನೀಡಿದರು.

ಮಕ್ಕಳಿಗೆ ಪೌಷ್ಟಿಕ ಆಹಾರ ವ್ಯಯಕ್ತಿಕ ಶುಚಿತ್ವದ ಕುರಿತು RKSK ಆಪ್ತ ಸಮಾಲೋಚಕರಾದ ನಿಂಗಣ್ಣಗೌಡ ಎಸ್ ಪಾಟೀಲ್ ರವರು ತಿಳಿಸಿದರು. ಅದೇ ರೀತಿಯಾಗಿ KHPT ಸಂಸ್ಥೆಯ ಸಮುದಾಯ ಸಂಘಟಕರಾದ ಮತಿ ಮೇಘಾ ಅವರು ನಿರೂಪಣೆ ಮಾಡುತ್ತಾ ಹದಿ ಹರೆಯದ ಮಕ್ಕಳಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತಿ ಉಪಾದ್ಯಕ್ಷರಾದ ಮತಿ ಲಕ್ಷ್ಮೀ ಮುದಗಲ್ ರವರು ವಂದಿಸಿದರು.

ಸದರಿ ಕಾರ್ಯಕ್ರಮದಲ್ಲಿ PHCO ರಾದ ಶ್ರೀಮತಿ ಚಂದ್ರಕಲಾ ಹಚ್ಚಡ KHPT ಸಮುದಾಯ ಸಂಘಟಕಾರದ ಶ್ರೀಮತಿ ಈರಮ್ಮ , ಶ್ರೀಮತಿ ಸಾವಿತ್ರಿ ಮತ್ತು ಶ್ರೀಮತಿ ದಾನಮ್ಮ ಹಾಗೂ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಮತ್ತು ಕಿಶೋರಿಯರ ಪಾಲಕರು ಮತ್ತು ಪೋಷಕರು ಭಾವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

ದುಬೈಯ ಹೆಸರಾಂತ ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಪ್ರಸ್ತುತಪಡಿಸುವ ಬಹು ನಿರೀಕ್ಷೆಯ ತುಳು ಚಲನಚಿತ್ರ “ಡಾ. ಮೋಹನ್ ಎಂಬಿಬಿಎಸ್” ಡಿಸೆಂಬರ್ ನಲ್ಲಿ ತೆರೆಗೆ. ಇದು ಕಾರ್ಪೊರೇಟ್ ವೈದ್ಯಕೀಯ ಮಾಫಿಯಾದ ವಿರುದ್ಧ ಸಿಡಿದೆದ್ದ ನಿಷ್ಠಾವಂತ ವೈದ್ಯನೊಬ್ಬನ ಕಥೆ .ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶನದ ಡಾ.ಸುಧಾಕರ್ ಶೆಟ್ಟಿ ಪುಣೆ- ಮೂಡಬಿದ್ರಿ ಪರಿಕಲ್ಪನೆಯ ಸಿನಿಮಾ.

Scroll to Top