ಡಾ.ಸುಧಾಕರ ಶೆಟ್ಟಿ ಅವರಿಗೆ “ಹೊರನಾಡ ಕನ್ನಡ ರತ್ನ” ಪ್ರಶಸ್ತಿ ಪ್ರದಾನ

119.1K Views 10 Jun 2024

ಖ್ಯಾತ ಮಕ್ಕಳ ತಜ್ಞ, ಪುಣೆಯ ಬೇಬಿ ಕ್ಲಿನಿಕ್ ನ, ಮೂಡುಬಿದಿರೆ ಮೂಲದ ಡಾ.ಸುಧಾಕರ ಶೆಟ್ಟಿ ಅವರಿಗೆ ಮುಂಬಯಿಯ ಕುರ್ಲಾ ಬಂಟರ ಭವನದ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದಲ್ಲಿ ಭಾನುವಾರ ನಡೆದ “ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ” ಕಾರ್ಯಕ್ರಮದಲ್ಲಿ “ಹೊರನಾಡ ಕನ್ನಡ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸಂಘ ಅಂಧೇರಿ ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಾ.ಸುಧಾಕರ ಶೆಟ್ಟಿ ಅವರ ಮೂರು ದಶಕಗಳ ವೈದ್ಯಕೀಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಯಿತು.
ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ,ಹೇರಂಬ ಇಂಡಸ್ಟ್ರೀಸ್ ನ ಸಿ.ಎಂ.ಡಿ ಕನ್ಯಾನ ಸದಾಶಿವ ಶೆಟ್ಟಿ ಮತ್ತಿತರ ಪ್ರಮುಖರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು.

Read More News

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಯಶಸ್ವಿಯಾಗಿ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ದುಬೈನಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ಆರೋಗ್ಯ, ಶಿಕ್ಷಣ, ವೈದ್ಯಕೀಯ ಸಮಾಜಮುಖಿ ಬಹು ಯೋಜನೆಗಳ ಬಗ್ಗೆ ಹುಟ್ಟೂರು ತುಂಬೆ ಹಿಲ್ಸ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ತುಂಬೆ ಗ್ರೂಪ್ಸ್ ಸಂಸ್ಥಾಪಕ ಡಾ. ತುಂಬೆ ಮೊಯ್ದೀನ್

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top