ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರನ್ನು ಚಿಕಿತ್ಸೆ ಪಡೆಯುತ್ತಿರುವ ದೇರಳಕಟ್ಟೆ ಕೆ. ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲು ಸಹಿತ ಬಿಜೆಪಿ ಮುಖಂಡರು. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರಗಿಸುವಂತೆ ಪೊಲೀಸ್ ಇಲಾಖೆಗೆ, ರಾಜ್ಯ ಸರಕಾರಕ್ಕೆ ಒತ್ತಾಯ.

112.1K Views 11 Jun 2024

ಮಂಗಳೂರು : ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುವ ಸುಸಂದರ್ಭದಲ್ಲಿ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ ಜೈ” ಘೋಷಣೆ ಕೂಗಿದ ಕಾರ್ಯಕರ್ತರಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳುಗಳು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಪ್ರಮುಖರುಗಳು ಭೇಟಿಯಾಗಿ ಧೈರ್ಯ ತುಂಬಿ,ದ.ಕ ಜಿಲ್ಲೆಯಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಹುನ್ನಾರವಾಗಿದ್ದು ಘಟನೆ ಬಳಿಕ ಪರಾರಿಯಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕೆಂದು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಚಿತ್ರಗಳು :ಸತೀಶ್ ಕಾಪಿಕಾಡ್

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top