ಎಂ.ಬಿ.ಭಾನುಪ್ರಕಾಶ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ.

108.7K Views 17 Jun 2024

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ (68 ವರ್ಷ)ಅವರ ನಿಧನ ಅತ್ಯಂತ ದುಃಖಕರ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ನಮ್ಮೆಲ್ಲ ಹಿರಿಯರು, ಮಾರ್ಗದರ್ಶಕರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರು, ವಿಧಾನಪರಿಷತ್ ಮಾಜಿ ಸದಸ್ಯ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾತ್ರವಲ್ಲದೆ, ಪ್ರಕೋಷ್ಠಗಳ ರಾಜ್ಯ ಸಂಯೋಜಕರಾಗಿ ಹಾಗೂ ಕರಾವಳಿ ಕರ್ನಾಟಕದ ಲೋಕಸಭಾ ಕ್ಲಸ್ಟರ್ ಪ್ರಮುಖರಾಗಿ ಅವರು ಅತ್ಯಂತ ಸಕ್ರಿಯವಾಗಿ ಕೆಲಸ ಮಾಡಿದವರು ಎಂದು ತಿಳಿಸಿದ್ದಾರೆ.
ಅವರ ಕುಟುಂಬಸ್ಥರು ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆಂದು ಬಿಜೆಪಿ ಕರ್ನಾಟಕದ ಮಾಧ್ಯಮ ಸಂಚಾಲಕರಾದ ಕರುಣಾಕರ ಖಾಸಲೆಯವರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Read More News

Scroll to Top