ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ಮಿತ್ರಂಪಾಡಿ ಜಯರಾಮ ರೈ.

118K Views 25 Jun 2024

ಬೆಂಗಳೂರು : ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಬುಧಾಬಿಯ ಖ್ಯಾತ ಉದ್ಯಮಿ,ವಿಶ್ವದ ಅತೀ ದೊಡ್ಡ ಅನಿವಾಸಿ ಭಾರತೀಯರ ಸಂಘಟನೆ ಯಾಗಿರುವ ಇಂಡಿಯಾ ಸೋಶಿಯಲ್ ಅಂಡ್ ಕಲ್ಚರಲ್ ಸೆಂಟರ್ ನ ಅಧ್ಯಕ್ಷರಾದ ಪುತ್ತೂರು ಮೂಲದ ಮಿತ್ರಂಪಾಡಿ ಜಯರಾಮ ರೈಯವರಿಗೆ ಜೂನ್ 23ರಂದು ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಯನ್ನು ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ನೀಡಿ ಗೌರವಿಸಿತ್ತು. ವಿದೇಶಿ ಗಣ್ಯರು ಸೇರಿದಂತೆ 60 ಮಂದಿ ಸಾಧಕರಿಗೆ 2024 ರ ಸಾಲಿನ 49 ನೇಯ ವಾರ್ಷಿಕ ‘ಆರ್ಯಭಟ ಅಂತರ್ ರಾಷ್ಟ್ರೀಯ ಪ್ರಶಸ್ತಿ’ಯನ್ನು ನೀಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನಿವೃತ್ತ ನ್ಯಾಯಮೂರ್ತಿಗಳಾದ ಡಾ| ಹೆಚ್.ಬಿ.ಪ್ರಭಾಕರ ಶಾಸ್ತ್ರಿಯವರು ನೆರವೇರಿಸಿದ್ದು, ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ| ಮಹೇಶ್ ಜೋಶಿಯವರು, ಖ್ಯಾತ ಚಲನಚಿತ್ರ ನಿರ್ದೇಶಕರಾದ ಡಾ. ಎಸ್.ನಾರಾಯಣ್ ರವರು ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಆರ್ಯಭಟ ಸಂಸ್ಥೆಯ ಸಂಸ್ಥಾಪಕರಾದ ಡಾ. ಹೆಚ್.ಎಲ್.ಎನ್.ರಾವ್ ರವರು ವಹಿಸಿದ್ದರು.


ಕಾನೂನು ಮತ್ತು ನ್ಯಾಯಾಂಗ ವಿಭಾಗದಿಂದ ಸಿ.ಕೆ. ವೀರೇಶ್‌ಕುಮಾರ್, ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ ರಕ್ಷಿತ್‌ ಶೆಟ್ಟಿ, ಪತ್ರಕರ್ತರಾದ ವೈ.ಎಸ್.ಎಲ್.ಸ್ವಾಮಿ. ಸರ್ಕಲ್ ಇನ್ಸ್‌ಪೆಕ್ಟ‌ರ್ ಆರ್.ಪಿ.ಅನಿಲ್, ಕತಾರ್‌ನಿಂದ ಅನಿಲ್ ಚಂದ್ರಶೇಖರ್ ಬಾಸಗಿ, ಲಂಡನ್‌ನಿಂದ ಡಾ. ಸತ್ಯವತಿ ಮೂರ್ತಿ, ಅಮೇರಿಕಾದಿಂದ ಪ್ರದ್ಯುಮ್ನ ಕಶ್ಯಪ್, ಕೃಷ್ಣ ಆದೋನಿ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದಿರುವ 60 ಸಾಧಕರಿಗೆ ಆರ್ಯಭಟ ಅಂತ‌ರಾಷ್ಟ್ರೀಯ ಪ್ರಶಸ್ತಿಯನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜೂನ್ 23ರ ಸಂಜೆ 6 ಗಂಟೆಗೆ ಪ್ರದಾನ ಮಾಡಲಾಯಿತು.
ಕರಾವಳಿಯ ಸಾಧಕರು: ಕರಾವಳಿ ಭಾಗದಿಂದ ರಾಜ್ಯ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ನಿಕಟಪೂರ್ವ ಅಧ್ಯಕ್ಷ, ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಕೆ ರವೀಂದ್ರ ಶೆಟ್ಟಿ ಉಳಿದೊಟ್ಟು, ಪುಣೆ ಅಹ್ಮದ್ ನಗರದ ಉದ್ಯಮಿ, ಧಾರ್ಮಿಕ ಸೇವಾಕರ್ತ ಕೆ.ಕೆ.ಶೆಟ್ಟಿ, ತುಳು ಸಾಹಿತಿ ಯೋಗೀಶ್ ಕಾಂಚನ್, ಯಕ್ಷಾಂಗಣ ಮಂಗಳೂರು ಉಪಾಧ್ಯಕ್ಷ ಎಂ.ಸುಂದರ ಶೆಟ್ಟಿ ಬೆಟ್ಟಂಪಾಡಿ, ಮೂಲ್ಕಿಯಿಂದ ಹೊಸ ಅಂಗಣ ಪತ್ರಿಕೆ ಯ ಸಂಪಾದಕ ಡಾ. ಹರಿಶ್ಚಂದ್ರ ಪಿ. ಸಾಲಿಯಾನ್, ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಪ್ರಶಸ್ತಿ ಸ್ವೀಕರಿಸಿದರು..

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top