ಐಪಿಎಸ್ ಅಧಿಕಾರಿಗಳ ವರ್ಗಾವಣೆ. ದಕ್ಷಿಣಕನ್ನಡ ಜಿಲ್ಲಾ ಎಸ್ ಪಿ ಯಾಗಿ ಯತೀಶ್ ಎನ್.

110.9K Views 3 Jul 2024

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯಾಗಿ ಯತೀಶ್ ಎನ್. ಅವರನ್ನು ನೇಮಕ ಮಾಡಲಾಗಿದೆ . ಈಗಿನ ಎಸ್ಪಿ ಸಿ.ಬಿ.ರಿಷ್ಯಂತ್ ಅವರನ್ನು ಬೆಂಗಳೂರಿನ ವೈರ್‌ಲೆಸ್ ಎಸ್ ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
2016 ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಗುಪ್ತಚರ ವಿಭಾಗದ ಪೊಲೀಸ್ ಮಹಾನಿರೀಕ್ಷಕ ಲಾಭು ರಾಮ್ ಅವರನ್ನು ಬೆಂಗಳೂರಿನ ಕೇಂದ್ರ ಶ್ರೇಣಿಯ ಪೊಲೀಸ್ ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.
ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ.ಕೆ.ತ್ಯಾಗರಾಜನ್ ಅವರನ್ನು ವರ್ಗಾವಣೆ ಮಾಡಿ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರೀಕ್ಷಕರಾಗಿ ನಿಯೋಜನೆ ಮಾಡಲಾಗಿದೆ.
ಮೈಸೂರು ನಗರ ಪೊಲೀಸ್ ಕಮಿಷನರ್ ಬಿ.ರಮೇಶ್ ಅವರನ್ನು ಉಪ ಪೊಲೀಸ್ ಮಹಾನಿರೀಕ್ಷಕರು, ಪೂರ್ವ ವಲಯ, ದಾವಣಗೆರೆಗೆ ವರ್ಗಾವಣೆ ಮಾಡಲಾಗಿದೆ.
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಿ ಮೈಸೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಬೆಂಗಳೂರು ನಗರ ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಿ.ಕೆ.ಬಾಬಾ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.ಹೀಗೇ ಐ
ಪಿ ಎಸ್ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಬಗ್ಗೆ ರಾಜ್ಯ ಸರಕಾರ ಆದೇಶ ಹೋರಾಡಿಸಿರುವ ಬಗ್ಗೆ ಬೆಂಗಳೂರು ವರದಿ ತಿಳಿಸಿದೆ.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top