ಆರೋಗ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ಅಸಹಾಯಕರಿಗೆ ಸಹಾಯಹಸ್ತ ನೀಡುವ ಕಾರ್ಯಕ್ರಮ ಸ್ಫೂರ್ತಿ ದಾಯಕ : ಡಾ. ಶಾಂತರಾಮ ಶೆಟ್ಟಿ.

115.2K Views 5 Jul 2024

ಮುಲ್ಕಿ :ರಾಮಕೃಷ್ಣ ಪೂಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ,ಟ್ರಸ್ಟಿ ಭಾಸ್ಕರ್ ಪೂಂಜ ಸಹಕಾರದೊಂದಿಗೆ
ಅಶಕ್ತರಿಗೆ ವೈದ್ಯಕೀಯ ನೆರವು ನೀಡುವ ಕಾರ್ಯಕ್ರಮ ಮುಲ್ಕಿಯ ಕಾರ್ನಾಡ್ ಪೂಂಜಾ ವಿಲ್ಲಾ ದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಿಟ್ಟೆ ಯುನಿವರ್ಸಿಟಿಯ ಪ್ರೊ ಚಾನ್ಸಿಲರ್ ಡಾ ಶಾಂತರಾಮ ಶೆಟ್ಟಿ ಮಾತನಾಡಿ ಆರೋಗ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ಅಸಹಾಯಕರಿಗೆ ಸಹಾಯ ಹಸ್ತ ನೀಡುವ ಕಾರ್ಯಕ್ರಮ ಸ್ಪೂರ್ತಿದಾಯಕವಾಗಿದ್ದು ಫಲಾನುಭವಿಗಳ ಆಶೀರ್ವಾದವೇ ಶ್ರೀರಕ್ಷೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂಂಜ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಉದ್ಯಮಿ ಅರವಿಂದ ಪೂಂಜ ವಹಿಸಿ ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡುವ ಕಾರ್ಯಕ್ರಮ ನಡೆಸುತ್ತಾ ಬಂದಿದ್ದು ನಿರಂತರವಾಗಿ ನಡೆಯಲಿದೆ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಸಂತಿ ಶಾಂತರಾಮ್ ಶೆಟ್ಟಿ, ಡಾ. ಲತೀಕಾ ಶೆಟ್ಟಿ, ಪೂಂಜಾ ಚಾರಿಟೇಬಲ್ ಟ್ರಸ್ಟಿಗಳಾದ ಅಶ್ವಿನಿ ಪೂಂಜ, ಆದಿತ್ಯ ಪೂಂಜಾ, ಅಪೂರ್ವ ಪೂಂಜಾ ಹಾಗೂ ಪೂಂಜಾ ಚಾರಿಟಬಲ್ ಟ್ರಸ್ಟ್ ನ ನಿರ್ದೇಶಕರು ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕ ವೈ ಎನ್ ಸಾಲ್ಯಾನ್ ನಿರೂಪಿಸಿದರು.
ಬಳಿಕ ಸುಮಾರು 10 ಲಕ್ಷ 25 ಸಾವಿರ ರೂ ವೆಚ್ಚದಲ್ಲಿ 160 ಮಂದಿ ಅಶಕ್ತರಿಗೆ ವೈದ್ಯಕೀಯ ನೆರವು ನೀಡುವ ಕಾರ್ಯಕ್ರಮ ನಡೆಯಿತು.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top