ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

117.9K Views 6 Jul 2024

ಬೆಂಗಳೂರು, ಜು.05 : ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಶುಕ್ರವಾರ ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ ಅಭಿವೃದ್ದಿ ಪರಿಷತ್‌ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ ಎಂದು ಹೇಳಿದರು.
ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಪಡೆದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ವಿದ್ಯಾರ್ಥಿಗಳ ಜತೆಯಲ್ಲಿ ಮಾಡಿದ ಊಟ, ಸಾಂಬಾರ್ ಚೆನ್ನಾಗಿತ್ತು‌ ಎಂದು ಅವರು ಈ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Read More News

ವಿಶಾಲ್ ಲಿಮಿಟೆಡ್ ಇನ್ಫ್ರಾ ಸ್ಟ್ರೈಕ್ಚರ್ ನ ಸೀನಿಯರ್ ಮೆನೇಜರ್ ಆಗಿ ರಾಜ್ಯದ ಮೂಲಭೂತ ಸೌಕರ್ಯ ಕಂಪನಿಯಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಾರ್ಪೊರೇಟ್ ಕ್ಷೇತ್ರದಲ್ಲಿ ಮಿಂಚುತ್ತಿರುವ ಕಾರ್ಕಳ ಮುನಿಯಲುವಿನ ಅಪೂರ್ವ ಸಾಧಕ, ಗ್ರಾಮದ ಸಂಸ್ಕೃತಿ,ವಿನಯತೆಯನ್ನು ತನ್ನ ವೃತ್ತಿ ಜೀವನಕ್ಕೆ ಅಳವಡಿಸಿ ಯುವಜನತೆಗೆ ಮಾದರಿಯಾಗಿರುವ ಹೆಮ್ಮಯ ಕನ್ನಡಿಗ ಜಿ. ಎಸ್. ಗಂಗಾಧರ ಆಚಾರ್ಯ. ಪರಿಚಯ ಲೇಖನ: ಡಾ. ಅಶೋಕ್ ಶೆಟ್ಟಿ. ಬಿ. ಎನ್.

Scroll to Top