ಉರ್ವ ವೇಲ್ಸ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಪುನರ್ ನಿರ್ಮಾಣದ ವಿಜ್ಞಾಪಣಾ ಪತ್ರ ಬಿಡುಗಡೆ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ನೆರವು: ಶಾಸಕ ಕಾಮತ್

106.6K Views 9 Jul 2024

ಮಂಗಳೂರು: ತುಳುನಾಡಿನಲ್ಲಿ ಪ್ರತಿಯೊಂದು ಧಾರ್ಮಿಕ ಕ್ಷೇತ್ರಗಳು ಕಾರಣಿಕ ಕ್ಷೇತ್ರಗಳಾಗಿ ಪ್ರಸಿದ್ಧಿ ಪಡೆದಿವೆ. ಧಾರ್ಮಿಕ ಆಚರಣೆಗಳು ನಿರಂಂತರವಾಗಿ ಮುಂದುವರಿಯಬೇಕು. ಜೀರ್ಣೋದ್ಧಾರ ಕಾರ್ಯಕ್ಕೆ ಸಿದ್ಧವಾಗುತ್ತಿರುವ ಉರ್ವ ವೇಲ್ಸ್ ಪೇಟೆ‌ ಶ್ರೀ ಬಬ್ಬುಸ್ವಾಮಿ‌ ಕ್ಷೇತ್ರದ ಕಾರ್ಯಗಳಿಗೆ‌ ತನ್ನಿಂದಾದ ಅಗತ್ಯ ನೆರವು ಒದಗಿಸಲಾಗುವುದು ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.
ಅವರು ಸೋಮವಾರ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ ಉರ್ವ ವೇಲ್ಸ್ ಪೇಟೆ ಇಲ್ಲಿನ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೈವಸ್ಥಾನದ ಪುನರ್ ನಿರ್ಮಾಣದ ವಿಜ್ಞಾಪಣಾ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.


ದೈವ ದೇವರ ಕೆಲಸ ಮಾಡುವುದೆಂದರೆ ಅದೊಂದು ಪುಣ್ಯದ ಕೆಲಸ. ಶಾಸಕನಾಗಿ ನನಗೂ ಹಲವು ಕ್ಷೇತ್ರಗಳ ಅಭಿವೃದ್ಧಿ ಕಾರ್ಯದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ಸಾರ್ವಜನಿಕರು, ಜನಪ್ರತಿನಿಧಿಗಳಿಂದ ಕೂಡ ವೇಲ್ಸ್ ಪೇಟೆಯ ಬಬ್ಬುಸ್ವಾಮಿ‌ ಕ್ಷೇತ್ರದ ಅಭಿವೃದ್ಧಿಗೆ ನೆರವು ದೊರೆಯುವಂತಾಗಲಿ ಎಂದವರು ಹೇಳಿದರು.
ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ‌ ಶುಭ ಹಾರೈಸಿದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮ ಉದ್ಘಾಟಿಸಿದರು.
ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಬಿ.ಜಿ.ಸುವರ್ಣ, ಕ್ಷೇತ್ರದ ಗುರಿಕಾರ ಬಾಲಕೃಷ್ಣ ಯು.ಎಸ್‌. ಮಾಜಿ ಮೇಯರ್ ಶಶಿಧರ ಹೆಗ್ಡೆ, ಕಾರ್ಪೋರೇಟರ್ ಗಳಾದ ಗಣೇಶ್ ಕುಲಾಲ್, ಕಿರಣ್ ಕುಮಾರ್ ಕೋಡಿಕಲ್, ಮನೊಜ್ ಕೋಡಿಕಲ್, ಸುರೇಖಾ ಶ್ರೀನಿವಾಸ್, ಸಿನೆಮಾ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್,ಉರ್ವ ಮಾರಿಯಮ್ಮ ಕ್ಷೇತ್ರದ ಆಡಳಿತ ಮೊಕ್ತೇಸರ ಲಕ್ಷ್ಮಣ್ ಕೋಡಿಕಲ್ ಚಾಮುಂಡೇಶ್ವರಿ ಕ್ಷೇತ್ರದ ಪ್ರಮುಖರಾದ ದೀಪಕ್, ಪ್ರಮುಖರಾದ ಬಾಬಾ ಅಲಂಕಾರ್‌,ರಾಧಾಕೃಷ್ಣ ಅಶೋಕನಗರ, ಕೃಷ್ಣ ಅಡಿಗ, ರವಿ ಕಾಪಿಕಾಡ್, ಅಮಿತಕಲಾ, ಸುಧಾಕರ ಆಳ್ವ, ಅರುಣ್ ಉರ್ವ, ಭುಜಂಗ ಶ್ರೀಯಾನ್, ರಮಾನಾಥ ಶೆಟ್ಟಿ, ವಿಠೋಬಾ ನೆಲ್ಲಿಪಾಡಿ, ಉದ್ಯಮಿ ದೀಪಕ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
ಸಮಿತಿಯ ಜೊತೆ ಕಾರ್ಯದರ್ಶಿ ರಘುವೀರ್ ಬಾಬು ಗುಡ್ಡೆ ಸ್ವಾಗತಿಸಿದರು. ರಘುವೀರ್ ಕದ್ರಿ ವಂದಿಸಿದರು. ಚೇತನ್ ಪಿಲಿಕುಳ ಕಾರ್ಯಕ್ರಮ ನಿರೂಪಿಸಿದರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top