ಜುಲೈ 14 ರಂದು ಚೆನ್ನೈ ಯಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮ

118.4K Views 12 Jul 2024

ಮಂಗಳೂರು, ಜುಲೈ 12,ಚೆನ್ನೈ ನಗರದ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಶ್ರೀ ಜೆ. ಎಸ್. ಪ್ರಭು ಹಾಗೂ ಶ್ರೀಮತಿ ರಮಾಬಾಯಿ ಪ್ರಭು ಸ್ಮರಣಾರ್ಥ ಸಂಗೀತ ಕಾರ್ಯಕ್ರಮ ಜುಲೈ 14 ಭಾನುವಾರ ದಂದು ಸಂಜೆ 6 ಗಂಟೆಯಿಂದ 7.45 ರ ವರೆಗೆ ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ನಡೆಯಲಿದೆ.
ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಲಾವಿದೆ ವಿಭಾ ಶ್ರೀನಿವಾಸ್ ನಾಯಕ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ ಹಾಗೂ ಮೂಡಬಿದಿರೆಯ ವಿಗ್ನೇಶ್ ಪ್ರಭು ತಬಲ ದಲ್ಲಿ ಸಾಥ್ ನೀಡಲಿದ್ದಾರೆ.ಸಂಯುಕ್ತ ಗೌಡ ಸಾರಸ್ವತ ಸಭಾ ಅಧ್ಯಕ್ಷ ಡಾ. ಎಸ್. ದಿನೇಶ್ ನಾಯಕ್ ಅವರು ಸಂಗೀತ ಕಲಾವಿದರನ್ನು ಸನ್ಮಾನಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

ದುಬೈಯ ಹೆಸರಾಂತ ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಪ್ರಸ್ತುತಪಡಿಸುವ ಬಹು ನಿರೀಕ್ಷೆಯ ತುಳು ಚಲನಚಿತ್ರ “ಡಾ. ಮೋಹನ್ ಎಂಬಿಬಿಎಸ್” ಡಿಸೆಂಬರ್ ನಲ್ಲಿ ತೆರೆಗೆ. ಇದು ಕಾರ್ಪೊರೇಟ್ ವೈದ್ಯಕೀಯ ಮಾಫಿಯಾದ ವಿರುದ್ಧ ಸಿಡಿದೆದ್ದ ನಿಷ್ಠಾವಂತ ವೈದ್ಯನೊಬ್ಬನ ಕಥೆ .ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶನದ ಡಾ.ಸುಧಾಕರ್ ಶೆಟ್ಟಿ ಪುಣೆ- ಮೂಡಬಿದ್ರಿ ಪರಿಕಲ್ಪನೆಯ ಸಿನಿಮಾ.

Scroll to Top