ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯ ಸನ್ಮಾನ ಸ್ವೀಕರಿಸಿದ ಕೇಂದ್ರ ಸಚಿವ ವಿ. ಸೋಮಣ್ಣ

114.4K Views 17 Jul 2024

ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ನಿವಾಸಕ್ಕೆ ಇಂದು ಬೆಳಿಗ್ಗೆ
ಆಗಮಿಸಿ ಆತ್ಮೀಯ ಆತಿಥ್ಯ ಸ್ವೀಕರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಮತ್ತು ಜಲಶಕ್ತಿ ಯೋಜನೆಗಳಿಗೆ ಅವರಿಂದ ಇನ್ನಷ್ಟು ವೇಗ ಮತ್ತು ಆಗಬೇಕಿರುವ ಹೊಸ ಯೋಜನೆಗಳಿಗೆ ತುಂಬು ಹೃದಯದ ಸಹಕಾರ ದೊರಕುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಮೇಯರ್ ಸುದೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಜಿಲ್ಲಾ ಅದ್ಯಕ್ಷರಾದ ಸತೀಶ್ ಕುಂಪಲ, ಪ್ರಮುಖರಾದ ಸಂಜೀವ ಮಠಂದೂರು,
ಕಿಶೋರ್ ಕುಮಾರ್ ,ದಿವಾಕರ ಪಾಂಡೇಶ್ವರ,ರಮೇಶ್ ಕಂಡೆಟ್ಟು, ಗಣೀಶ್ ಕುಲಾಲ್, ರಾಹುಲ್ ಶೆಟ್ಟಿ, ಗೌತಮ್ ಮೊದಲಾದವರು ಉಪಸ್ಥಿತರಿದ್ದರು.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

ದುಬೈಯ ಹೆಸರಾಂತ ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಪ್ರಸ್ತುತಪಡಿಸುವ ಬಹು ನಿರೀಕ್ಷೆಯ ತುಳು ಚಲನಚಿತ್ರ “ಡಾ. ಮೋಹನ್ ಎಂಬಿಬಿಎಸ್” ಡಿಸೆಂಬರ್ ನಲ್ಲಿ ತೆರೆಗೆ. ಇದು ಕಾರ್ಪೊರೇಟ್ ವೈದ್ಯಕೀಯ ಮಾಫಿಯಾದ ವಿರುದ್ಧ ಸಿಡಿದೆದ್ದ ನಿಷ್ಠಾವಂತ ವೈದ್ಯನೊಬ್ಬನ ಕಥೆ .ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶನದ ಡಾ.ಸುಧಾಕರ್ ಶೆಟ್ಟಿ ಪುಣೆ- ಮೂಡಬಿದ್ರಿ ಪರಿಕಲ್ಪನೆಯ ಸಿನಿಮಾ.

Scroll to Top