ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿಯವರಿಂದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣೆ ಶಿಬಿರ ನಡೆಯಿತು

119.7K Views 22 Jul 2024

ಮಂಗಳೂರು : ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಖ್ಯಾತ ಮಕ್ಕಳ ತಜ್ಞ, ದ.ಕ.ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಹಾಗೂ ಹೊರನಾಡ ಕನ್ನಡ ರತ್ನ ಪ್ರಶಸ್ತಿ ಪುರಸ್ಕೃತ ಡಾ‌.ಸುಧಾಕರ ಶೆಟ್ಟಿ ಅವರಿಂದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣಾ ಶಿಬಿರವು ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಕ್ಷಯಧಾಮದಲ್ಲಿ ಜುಲೈ 14 ರಂದು ನಡೆಯಿತು.


ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ12 ರ ವರೆಗೆ ನಡೆದ ಈ ಶಿಬಿರದ ಪ್ರಯೋಜನವನ್ನು ಕಲ್ಲಬೆಟ್ಟು ಮತ್ತು ಆಸುಪಾಸಿನ ಗ್ರಾಮಗಳ ಮಕ್ಕಳು ಪಡೆದುಕೊಂಡರೆಂದು ಸಂಘದ ಅಧ್ಯಕ್ಷ ಸುರೇಶ್ ಕೋಟ್ಯಾನ್, ಉಪಾಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿತಾ ಆರ್.ಶೆಟ್ಟಿ ಅವರು ತಿಳಿಸಿದ್ದಾರೆ .ಈ ಶಿಬಿರಕ್ಕೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಸಹಕಾರವಿತ್ತು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top