ಆಗಸ್ಟ್ 6 ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ

116.8K Views 4 Aug 2024

ಮಂಗಳೂರು, ಆಗಸ್ಟ್ 4: ದಕ್ಷಿಣ ಕನ್ನಡ ಖಾಸಗಿ ಬಸ್ಸು ಮಾಲಕರ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಭಾಗಿ ತ್ವದಲ್ಲಿ ಪತ್ರಕರ್ತರಿಗೆ ಬಸ್ ಪಾಸ್ ವಿತರಣಾ ಕಾರ್ಯಕ್ರಮ ಆಗಸ್ಟ್ 6 ರಂದು ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನ ದಲ್ಲಿ ನಡೆಯಲಿದೆ.
ಮಂಗಳೂರು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ದಿನೇಶ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಕೆ ಬಸ್ ಪಾಸ್ ವಿತರಣೆ ಮಾಡಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಆಝೀಜ್ ಪರ್ತಿಪ್ಪಾಡಿ, ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮ್ ಫಾರೂಕಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್ ಗೌರವ ಉಪಸ್ಥಿತರಿರುತ್ತಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top