ಗೋಪಾಲಕೃಷ್ಣ ಅಸ್ರಣ್ಣರ ಸಂಸ್ಮರಣ ಕಾರ್ಯಕ್ರಮ. ಐಕಳ ಹರೀಶ್ ಶೆಟ್ಟಿಯವರಿಗೆ ಸನ್ಮಾನ

115.5K Views 13 Aug 2024

ಮುಂಬೈ: ಶ್ರೀ ಕ್ಷೇತ್ರ ಕಟೀಲಿನ ಗೋಪಾಲಕೃಷ್ಣ ಅಸ್ರಣ್ಣರ 24ನೇ ವರ್ಷದ ಸಂಸ್ಮರಣ ಕಾರ್ಯಕ್ರಮವು ಬಂಟರ ಸಂಘ ಮುಂಬೈಯ ಬಂಟರ ಭವನದಲ್ಲಿ ಶ್ರೀ ಕ್ಷೇತ್ರ ಕಟೀಲಿನ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ದಿವ್ಯ ಉಪಸ್ಥಿತಿಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಕಟೀಲಿನ ಒಳಿತಿಗಾಗಿ ಶ್ರಮಿಸಿದ ಐಕಳ ಹರೀಶ್ ಶೆಟ್ಟಿಯವರನ್ನು ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರು ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಿದರು. ಅಲ್ಲದೆ ಹಲವಾರು ಕಲಾವಿದರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟವು ಜರಗಿತು.
ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ದಾನಿಗಳಾದ ಡಾ. ಆರ್. ಕೆ. ಶೆಟ್ಟಿ, ರತ್ನಾಕರ್ ಶೆಟ್ಟಿ ಮುಂಡ್ಕೂರು, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ,ಪದ್ಮನಾಭ ಕಟೀಲು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Read More News

ಪತ್ರಕರ್ತರಿಗೆ ನಿವೃತ್ತಿ ನಂತರ ಪಿಂಚಣಿ ಸೇರಿದಂತೆ ಸರಕಾರದ ಸಮರ್ಪಕ ಸೌಲಭ್ಯಗಳು ಸಕಾಲದಲ್ಲಿ ದೊರೆಯದಿರುವುದು ವಿಷಾದನೀಯ. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಬದಲಾವಣೆ ತರಲು ಸಂಘಟಿತ ಪ್ರಯತ್ನದ ಅಗತ್ಯತೆ ಇದೆ -ಬಂಟ್ವಾಳ ತಾಲೂಕು ಪತ್ರಿಕಾ ದಿನಾಚರಣೆಯಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ. ಎನ್. ಆಶಯ.

Scroll to Top