ಪುರಭವನದಲ್ಲಿ ಶ್ರಾವಣ ಸಂಭ್ರಮ

112.5K Views 18 Aug 2024

ಆಷಾಡದ ಬಿರುಸಿನ ಮಳೆಯ ಸಂಕಷ್ಟಗಳನ್ನು ಮನೆಯ ಒಳಗೆ ಅನುಭವಿಸಿ ಪರಿಸರದ ಬದುಕಿಗೆ ತೆರೆದುಕೊಳ್ಳುವ ಮೂಲಕ ಹಬ್ಬ ಹರಿದಿನಗಳಲ್ಲಿ ಸಂತೋಷ ಕಂಡುಕೊಳ್ಳುವುದಕ್ಕೇ ಶ್ರಾವಣ ಬಂದಿದೆ. ಹೆಂಗಸರೆಲ್ಲ ವರಮಹಾಲಕ್ಷ್ಮಿಯನ್ನು ಪೂಜಿಸಿ, ಮನೆ ಮತ್ತು ಮನಸಿನ ಸಂಕಟಗಳನ್ನು ಕಳೆಯಲು ಉಪವಾಸ ವೃತಗಳನ್ನು ಕೈಗೊಳ್ಳುವ ಈ ತಿಂಗಳ ದಿನಗಳು ಎಲ್ಲರ ಸಂಭ್ರಮದ ದಿನಗಳಾಗಿರುತ್ತವೆ ಎಂದು ಶ್ರೀ ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಸುಲೋಚನ ಪಚಿನಡ್ಕ ರವರು ಹೇಳಿದರು.
ಅವರು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು 16-08-2024 ರಂದು ಮಂಗಳೂರು ಪುರಭವನದಲ್ಲಿ ಆಯೋಜಿಸಿದ್ದ “ಶ್ರಾವಣ ಸಂಭ್ರಮ” ಕವಿಗೋಷ್ಠಿ, ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂತಹ ಕಾರ್ಯಕ್ರಮಗಳಿಗೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾದರೂ ಕಲೆ ಮತ್ತು ಸಾಹಿತ್ಯದ ಬಗ್ಗೆ ಆಸಕ್ತಿ ಇರುವವರ ಸಂಖ್ಯೆ ಕಡಿಮೆಯಾಗದು. ಯಾವುದೇ ಕಾರ್ಯಕ್ರಮವಾದರೂ ಅದನ್ನು ವಿಶಿಷ್ಟ ರೀತಿಯಲ್ಲಿ ಆಯೋಜನೆ ಮಾಡುವ KSSAP ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನನಗೆ ಸಂತಸ ತಂದಿದೆ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ವಿಶೇಷ ಸಾಧನೆಗೈದ ಹಿರಿಯ ಗೌರವ ಉಪನ್ಯಾಸಕ ವ. ಉಮೇಶ ಕಾರಂತ್‌ರವರಿಗೆ ಶಾಲು, ಹಾರ ಪೇಟ ತೊಡಿಸಿ ಫಲತಾಂಬೂಲ ಸನ್ಮಾನ ಫಲಕದೊಂದಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ವಹಿಸಿದ್ದರು. NSCDF ನ ಅಂತರರಾಷ್ಟ್ರೀಯ ವಕ್ತಾರೆ ಮಮ್ತಾ ಕೋಟ್ಯಾನ್ ಮುಂಬೈ ಉಪಸ್ಥಿತರಿದ್ದರು.
ಡಾ. ಸುರೇಶ್ ನೆಗಳಗುಳಿಯವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ವೆಂಕಟೇಶ್ ಗಟ್ಟಿ, ದೀಪಾ ಚಿಲಿಂಬಿ, ಅನಿತಾ ಶೆಣೈ, ನಿಶಾನ್ ಅಂಚನ್, ಕೊಳ್ಚಪ್ಪೆ ಗೋವಿಂದ ಭಟ್, ಶಿವಪ್ರಸಾದ್ ಕೊಕ್ಕಡ, ಗುರುರಾಜ್ ಎಂ. ಆರ್, ಡಾ. ವಾಣಿಶ್ರೀ ಕಾಸರಗೋಡು, ಉಮೇಶ್ ಕಾರಂತ್, ಸುಲೋಚನ ನವೀನ್ ಮುಂತಾದ ಕವಿಗಳು ತಮ್ಮ ಸ್ವರಚಿತ ಕವನ ವಾಚನ ಮಾಡಿದರು. ಗಂಗಾಧರ್ ಗಾಂಧಿ ಕಾರ್ಯಕ್ರಮ ನಿರೂಪಿಸಿದರು.
ಗಡಿನಾಡ ಕನ್ನಡತಿ ಡಾ.ವಾಣಿಶ್ರೀ ಮತ್ತು ಗುರುರಾಜ್ ಕಾಸರಗೋಡು ತಂಡದಿಂದ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳು, ಗೀತ ಗಾಯನ ಹಾಗೂ ಯಕ್ಷನೃತ್ಯ ನಡೆಯಿತು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top