ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ -ನಳಿನ್ ಕುಮಾರ್ ಕಟೀಲ್ ಆರೋಪ

106.2K Views 20 Aug 2024

ಮಂಗಳೂರು: ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆಸಿರುವ ನಳಿನ್ ಕುಮಾರ್ ಕಟೀಲ್ ಮೂಡಾ ಹಗರಣ ದಲ್ಲಿ ಸಾವಿರಾರು ಕೋಟಿ ಲೂಟಿ ಆಗಿದೆ. ವಾಲ್ಮೀಕಿ ನಿಗಮದಲ್ಲೂ 187 ಕೋಟಿ ಹಗರಣ ಆಗಿದೆ. ಆದರೂ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕಾರದ ಆಸೆಗೆ ಆಂಟಿ ಕುಳಿತುಕೊಂಡಿದ್ದಾರೆ. ಸಿದ್ದರಾಮಯ್ಯ ನವರು ನೈತಿಕತೆ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಸವಾಲು ಹಾಕಿದರು. ಹೋರಾಟದ ನೆಪದಲ್ಲಿ ಕಾಂಗ್ರೆಸ್ ಆರಾಜಕತೆ ಸ್ರಷ್ಟಿಸಲು ಪ್ರಯತ್ನಿಸುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಡಳು ಕಾರಣವಾಗುತ್ತಿದೆ. ರಾಜ್ಯಪಾಲರ ನಡೆ ಸಮರ್ಥನಿಯವಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ನಿಂದಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top