ಆ.24ರಂದು ಎಂ.ಆರ್.ಪೂವಮ್ಮ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

105.5K Views 22 Aug 2024

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಆ. 24ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ
ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಒಲಿಂಪಿಕ್ ಕ್ರೀಡಾಪಟು ಎಂ.ಆರ್. ಪೂವಮ್ಮ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.
ಸುಯೆಝ್ ಪ್ರಾಜೆಕ್ಟ್ಸ್ ಕಂಪನಿಯ ಕಾರ್ಪೊರೇಟ್ ಕಮ್ಯುನಿಕೇಶನ್ಸ್ ಮ್ಯಾನೇಜರ್ ಡಾ.ರೇಶ್ಮಾ ಉಳ್ಳಾಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

Scroll to Top