ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ: 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ

119.1K Views 27 Aug 2024

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದೆ. 2022ನೇ ಸಾಲಿನಲ್ಲಿ ಹಂಝತುಲ್ಲಾಹ್‌ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್‌ ಇಸ್ಮಾಈಲ್‌ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್‌ ಹಮೀದ್‌ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ), ಅಶ್ರಫ್‌ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಮತ್ತು ಮುಹಮ್ಮದ್‌ ಶರೀಫ್‌ ನಿರ್ಮುಂಜೆ (ಬ್ಯಾರಿ ಸಾಹಿತ್ಯ) ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅಕಾಡೆಮಿಯ ಮಾಜಿ ಅಧ್ಯಕ್ಷ ಮುಹಮ್ಮದ್‌ ಕರಂಬಾರು, ಮಾಜಿ ಸದಸ್ಯರಾದ ಅತ್ತೂರು ಚೆಯ್ಯಬ್ಬ, ಆಯಿಶಾ ಯು.ಕೆ. ಮತ್ತು ಹುಸೈನ್‌ ಕಾಟಿಪಳ್ಳ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದು ಸಹಕರಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ.
ಪ್ರಶಸ್ತಿಯು ಐವತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆ. 6ರಂದು ಸಂಜೆ 4.30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಉಮರ್‌ ಯು. ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top