‘ಪ್ಲಾಸ್ಟಿಕ್ ನಿರ್ಮೂಲನಕ್ಕೆ ಜನ ಜಾಗ್ರತಿ ಮೂಡಿಸುವ ಅಗತ್ಯವಿದೆ’ : ವಿಧಾನ ಸಭೆ ಸ್ಪೀಕರ್ ಯು ಟಿ ಖಾದರ್

112.4K Views 11 Sep 2024

ಮಂಗಳೂರು, ಸೆಪ್ಟೆಂಬರ್ 11,ಪ್ಲಾಸ್ಟಿಕ್ ಬಳಕೆಯಿಂದ ಆಗುವ ಹಾನಿಗಳ ಕುರಿತು ಜನ ಜಾಗ್ರತಿ ಮೂಡಿಸುವ ಕೆಲಸಗಳನ್ನು ಸಂಘ ಸಂಸ್ಥೆಗಳು ಮಾಡಬೇಕು. ಇದನ್ನು ಸಂಪೂರ್ಣ ನಿಯಂತ್ರಿಸಲು ಜನರ ಸಹಭಾಗಿತ್ವ ಅಗತ್ಯ ಇದೆ ಎಂದು ಹೇಳಿದರು.
ನಗರದ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ನೂತನವಾಗಿ ಆರಂಭಗೊಂಡ ಸ್ವಚ್ಚ ಪರಿಸರ ಪ್ರತಿಷ್ಠಾನ ವನ್ನು ಉದ್ಘಾಟಿಸಿ ಸ್ಪೀಕರ್ ಯು ಟಿ ಖಾದರ್ ಮಾತನಾಡಿದರು. ಪ್ಲಾಸ್ಟಿಕ್ ಮರು ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಷ್ಠಾನ ಮುತುವರ್ಜಿಯಿಂದ ಕೆಲಸ ಮಾಡಬೇಕು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳನ್ನು ಪ್ಲಾಸ್ಟಿಕ್ ಜಾಗ್ರತಿ ಅಭಿಯಾನದಲ್ಲಿ ತೋಡಗಿಸಿಕೊಳ್ಳುವ0ತೆ ಸಲಹೆ ನೀಡಿದರು.
ಸ್ವಚ್ಚ ಪರಿಸರ ಪ್ರತಿಷ್ಠಾನ ಟ್ರಸ್ಟಿ ಸಂತೋಷ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,ರಾಮಕೃಷ್ಣ ಮಿಷನ್ ಸ್ವಚ್ಚ ಮಂಗಳೂರು ಅಭಿಯಾನದ ಮುಖ್ಯ ಸಯೋ0ಜಕ ರಂಜನ್ ಬೆಳ್ಳಪಾರ್ದಿ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಮಾಜಿ ಉಪ ಮೇಯರ್ ಸುಮಂಗಲ ರಾವ್, ಪಾಲಿಕೆ ಸದಸ್ಯ ವಿನಯರಾಜ್,ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಸ0ಯೋಜನಾಧಿಕಾರಿ ಶೇಷಪ್ಪ ಅಮೀನ್,ಮಂಗಳೂರು ವಲಯ ಪಿ ಆರ್ ಓ ರೆವ್ ಡಾ ಜೆಬಿ ಸಲ್ಡಾನ್ಹಾ ಹರೇಕಳ ಜುಮ್ಮಾ ಮಸೀದಿ ಧರ್ಮ ಗುರುಗುರು ಹಫಿಲ್ ಯಾಕೂಬ್ ಸಹಿದಿ ಉಪಸ್ಥಿತರಿದ್ದರು.
ಪುಷ್ಪರಾಜ್ ಸ್ವಾಗತಿಸಿ ವಂದಿಸಿದರು. ಪ್ರಿಯಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

Scroll to Top