ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ

115.4K Views 28 Sep 2024

ಮಂಗಳೂರು, ಸೆಪ್ಟೆಂಬರ್ 28,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,, ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸ ಹಭಾಗಿತ್ವ ದಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ ಅಕ್ಟೋಬರ್ ಒಂದರಂದು ಬೆಳಿಗ್ಗೆ 10 ಗಂಟೆಗೆ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ನಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ಆನಂದ್ ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ವಿದ್ಯಾರ್ಥಿಗಳಿಗೆ ಬಟ್ಟೆ ಬ್ಯಾಗ್ ವಿತರಣೆ ಮಾಡಲಿದ್ದಾರೆ. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಬ್ರಾಯನ್ ಪಿಂಟೋ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾ0ಶುಪಾಲ ಡಾ ಜಗದೀಶ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Read More News

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ, ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಅವರ ಪತ್ನಿ ಅಗಲಿಕೆ: ಮಂಗಳೂರಿನ ಹ್ಯಾಟ್ ಹಿಲ್ ನಲ್ಲಿ ಇಂದು ಬೆಳಿಗ್ಗೆ (ಅಕ್ಟೋಬರ್ 25) ಗಂಟೆ 10 ರಿಂದ 12ರವರೆಗೆ ಅಂತಿಮ ದರ್ಶನ ಮತ್ತು 12.30ಕ್ಕೆ ಕದ್ರಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ

Scroll to Top