ಅಕ್ಟೋಬರ್ 2: ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ

111.6K Views 30 Sep 2024

ಮಂಗಳೂರು, ಸೆಪ್ಟೆಂಬರ್ 30, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪೊಲೀಸ್ ಕಮಿಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಶನ್ ನೇತೃತ್ವದಲ್ಲಿ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಅಕ್ಟೋಬರ್ 2 ರಂದು ಬುಧವಾರ ಬೆಳಿಗ್ಗೆ 9 ಗಂಟೆಗೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನ ದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ತಂಡ, ಮಂಗಳೂರು ಪೊಲೀಸ್ ಆಯುಕ್ತರ ತಂಡ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಗಳ ತಂಡ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಂಡ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ತಂಡ ಪಂದ್ಯಾವಳಿ ಯಲ್ಲಿ ಭಾಗವಹಿಸಲಿವೆ.
ಈ ಕ್ರಿಕೆಟ್ ಪಂದ್ಯಾವಳಿ ಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಉದ್ಘಾಟಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಸರಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟಲು ನೀಡುವ ERIG ಇಂಜೆಕ್ಷನ್ ಕಳಪೆ ಗುಣಮಟ್ಟದ ಔಷಧವಲ್ಲ -ಡಿಎಂಒ ಡಾ. ಶಿವಪ್ರಕಾಶ್ ಸ್ಪಷ್ಟನೆ. ಅದು ಓಕೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಬೆಲೆ ಬಾಳುವ ರಿಸ್ಕ್ ರಹಿತ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್ ಗಳ ಬಳಕೆಗೆ mpmlasnewstv ಒತ್ತಾಯ

Scroll to Top