‘ಪ್ಲಾಸ್ಟಿಕ್ ನಿರ್ಮೂಲನೆಗೆ ಸಮುದಾಯದ ಸಹಭಾಗಿತ್ವ ಅಗತ್ಯ’ ದ.ಕ. ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ .ಕೆ.

104.7K Views 1 Oct 2024

ಮಂಗಳೂರು: ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳನ್ನು ಹೆಚ್ಚು ಬಳಸುವ ಮೂಲಕ  ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಹಾಕಬಹುದು. ಪ್ಲಾಸ್ಟಿಕ್ ನಿರ್ಮೂಲನೆಗೆ ಸ್ಥಳೀಯಾಡಳಿತ ಸಂಸ್ಥೆಗಳು ಶ್ರಮಿಸಿಸುತ್ತಿದ್ದು, ಇದರ ಯಶಸ್ವಿಗೆ  ಸಮುದಾಯದ ಸಹಭಾಗಿತ್ವ ಅಗತ್ಯ. ಪ್ಲಾಸ್ಟಿಕ್ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರತಿನಿಧಿಗಳಾಗಿ ವಿದ್ಯಾರ್ಥಿಗಳು  ಕಾರ್ಯ ನಿರ್ವಹಿಸಬೇಕು ಎಂದು ದ.ಕ.ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ .ಕೆ. ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ.ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯಿತಿ ಮತ್ತು ಬಲ್ಮಠದ ಸರ್ಕಾರಿ  ಪ್ರಥಮ ದರ್ಜೆ ಮಹಿಳಾ ಕಾಲೇಜು ಸಹಭಾಗಿತ್ವದಲ್ಲಿ ಮಂಗಳವಾರ ಬಲ್ಮಠದ ಸರ್ಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆದ
ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಹಸಿ ಕಸ ಮತ್ತು ಒಣ ಕಸವನ್ನು ವಿಂಗಡಣೆ ಮಾಡದೆ ನೀಡುವ ಕಾರಣ ಸ್ಥಳೀಯಾಡಳಿತ ಸಂಸ್ಥೆಗಳಿಗೆ ತ್ಯಾಜ್ಯ ವಿಲೇವಾರಿ ಸಮಸ್ಯೆಯಾಗಿ ಪರಿಣಮಿಸಿದೆ. ಮೂಲದಲ್ಲೇ ತ್ಯಾಜ್ಯ ವಿಂಗಡಣೆ ಮಾಡಿದರೆ ಸಮರ್ಪಕ ವಿಲೇವಾರಿ ಸಾಧ್ಯ. ಪ್ಲಾಸ್ಟಿಕ್ ಬಳಕೆ ಕಡಿತಗೊಳಿಸುವುದರ ಜತೆಗೆ  ಮರುಬಳಕೆ ಮಾಡುವ ಉತ್ಪನ್ನಗಳ  ಬಗ್ಗೆ ಗಮನಹರಿಸಿದರೆ ಪರಿಸರಕ್ಕೆ ಹಾನಿಯಾಗುವುದನ್ನು ತಡೆಗಟ್ಟಬಹುದು ಎಂದು ಅವರು ಹೇಳಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ  ಪ್ರಾಂಶುಪಾಲ ಡಾ ಜಗದೀಶ ಬಾಳ ಅಧ್ಯಕ್ಷತೆ ವಹಿಸಿದ್ದರು.
ಅದಾನಿ ಸಂಸ್ಥೆಯ ಎಜಿಎಂ ರವಿ ಜೇರಾ ವಿದ್ಯಾರ್ಥಿಗಳಿಗೆ ಬಟ್ಟೆ ಬ್ಯಾಗ್ ವಿತರಿಸಿದರು. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್
ಅಧ್ಯಕ್ಷ ಬ್ರಾಯನ್ ಪಿಂಟೊ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ನಿರ್ದೇಶಕ ಪುಷ್ಪರಾಜ್ ಜೈನ್ , ಮಂಗಳೂರು ಮಹಾನಗರ ಪಾಲಿಕೆ ಉಪ ಆಯುಕ್ತ ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿ
ಭಾಗವಹಿಸಿದ್ದರು. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್  ಪೂರ್ವಾಧ್ಯಕ್ಷ ಸಂತೋಷ್ ಶೇಟ್, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ,  ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್. ಉಪಸ್ಥಿತರಿದ್ದರು.  ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top