ಸುಭಾಷಿತನಗರದಲ್ಲಿ ಸ್ವಚ್ಛತಾ ಅಭಿಯಾನ

94.3K Views 2 Oct 2024

ಸುರತ್ಕಲ್ :ಗಾಂಧಿ ಜಯಂತಿ ದಿನದಂದು ಸುರತ್ಕಲ್ ಸುಭಾಷಿತ ನಗರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ರಮ ಬೆಳಿಗ್ಗೆ ನಡೆಯಿತು. ಸುಭಾಷಿತ ನಗರ ವ್ಯಾಪ್ತಿಯಲ್ಲಿ ಸ್ವಚ್ಛತೆ ನಡೆಯಿತು. ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.


ಅಸೋಸಿಯೇಶನ್ ನ ಉಪಾಧ್ಯಕ್ಷ ತಾರಾನಾಥ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿ ನರಸಿಂಹ ಸುವರ್ಣ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಜೊತೆ ಕಾರ್ಯದರ್ಶಿ ಲಕ್ಷ್ಮೀ ಚಂದ್ರಶೇಖರ ಹಾಗೂ ಅಸೋಸಿಯೇಶನ್ ನ ಸದಸ್ಯರು ಪಾಲ್ಗೊಂಡಿದ್ದರು.
ಬಳಿಕ ಅಸೋಶಿಯನ್ ನ ಸರ್ವ ಸದಸ್ಯರ ಸಭೆ ರಮೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

ದುಬೈಯ ಹೆಸರಾಂತ ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಪ್ರಸ್ತುತಪಡಿಸುವ ಬಹು ನಿರೀಕ್ಷೆಯ ತುಳು ಚಲನಚಿತ್ರ “ಡಾ. ಮೋಹನ್ ಎಂಬಿಬಿಎಸ್” ಡಿಸೆಂಬರ್ ನಲ್ಲಿ ತೆರೆಗೆ. ಇದು ಕಾರ್ಪೊರೇಟ್ ವೈದ್ಯಕೀಯ ಮಾಫಿಯಾದ ವಿರುದ್ಧ ಸಿಡಿದೆದ್ದ ನಿಷ್ಠಾವಂತ ವೈದ್ಯನೊಬ್ಬನ ಕಥೆ .ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶನದ ಡಾ.ಸುಧಾಕರ್ ಶೆಟ್ಟಿ ಪುಣೆ- ಮೂಡಬಿದ್ರಿ ಪರಿಕಲ್ಪನೆಯ ಸಿನಿಮಾ.

Scroll to Top