ಅಕ್ಟೋಬರ್ 28 ರಂದು ಕುತ್ಲುರು ಸರಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಣೆ

104K Views 25 Oct 2024

ಮಂಗಳೂರು, ಅಕ್ಟೋಬರ್ 25,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಂಘದ ಸಹಭಾಗಿತ್ವದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಕುತ್ಲುರು ಸರಕಾರಿ ಶಾಲೆ ಮಕ್ಕಳಿಗೆ ಎಂಸಿಫ್ ಸಿ ಎಸ್ ಆರ್ ನಿಧಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಸಮವಸ್ತ್ರ ವಿತರಣೆ ಅಕ್ಟೋಬರ್ 28 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನ ದಲ್ಲಿ ನಡೆಯಲಿದೆ.


ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಮವಸ್ತ್ರ ವಿತರಣೆ ಮಾಡಲಿದ್ದಾರೆ.ಸಾಹಸ ಪ್ರವಾಸೋದ್ಯಮ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ಕುತ್ಲುರು ಗ್ರಾಮದ ಪ್ರತಿನಿಧಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಯತೀಶ್ ಸನ್ಮಾನಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಎಂಸಿಫ್ ಕಂಪನಿ ಚೀಫ್ ಪ್ರೊಡಕ್ಷನ್ ಆಫೀಸರ್ ಗಿರೀಶ್. ಎಸ್, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಚೇತನ್ ಮೆಂಡೋನ್ಸ, ಸಾರ್ವಜನಿಕ ಸಂಪರ್ಕಧಿಕಾರಿ ಅವಿನಂದನ್, ಕುತ್ಲುರು ಸರಕಾರಿ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್ ಉಪಸ್ಥಿತರಿಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

ದುಬೈಯ ಹೆಸರಾಂತ ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಪ್ರಸ್ತುತಪಡಿಸುವ ಬಹು ನಿರೀಕ್ಷೆಯ ತುಳು ಚಲನಚಿತ್ರ “ಡಾ. ಮೋಹನ್ ಎಂಬಿಬಿಎಸ್” ಡಿಸೆಂಬರ್ ನಲ್ಲಿ ತೆರೆಗೆ. ಇದು ಕಾರ್ಪೊರೇಟ್ ವೈದ್ಯಕೀಯ ಮಾಫಿಯಾದ ವಿರುದ್ಧ ಸಿಡಿದೆದ್ದ ನಿಷ್ಠಾವಂತ ವೈದ್ಯನೊಬ್ಬನ ಕಥೆ .ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶನದ ಡಾ.ಸುಧಾಕರ್ ಶೆಟ್ಟಿ ಪುಣೆ- ಮೂಡಬಿದ್ರಿ ಪರಿಕಲ್ಪನೆಯ ಸಿನಿಮಾ.

Scroll to Top