ಮಂಗಳೂರು: ಪಾಲ್ದನೆ ಚರ್ಚ್ ಗೆ ಐಜ್ವಾಲ್‌ ಧರ್ಮಾಧ್ಯಕ್ಷರ ಭೇಟಿ

96.1K Views 27 Oct 2024

ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಜಾ ಚರ್ಚ್‌ ಗೆ ಉತ್ತರ ಭಾರತದ ಐಜ್ವಾಲ್‌ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಜೋಕಿಂ ವಾಲ್ಡರ್‌ ಅವರು ಅತಿಥಿಯಾಗಿ ಆಗಮಿಸಿ ಇಂದು ಬೆಳಗ್ಗಿನ ಬಲಿ ಪೂಜೆಯ ನೇತೃತ್ವ ವಹಿಸಿದ್ದರು. ಅವರು ತಮ್ಮ ಪ್ರವಚನದಲ್ಲಿ ಬಡ ಬಗ್ಗರ ಬಗ್ಗೆ ನಾವು ಹೆಚ್ಚಿನ ಕಾಳಜಿ ವಹಿಸ ಬೇಕು. ಪ್ರಾರ್ಥನೆ ನಮ್ಮ ಆದ್ಯತೆ ಆಗ ಬೇಕೆಂದರು. ಬಲಿ ಪೂಜೆಯ ಬಳಿಕ ಅವರ ಭೇಟಿಯ ಸವಿ ನೆನಪಿಗಾಗಿ ಅವರನ್ನು ಸನ್ಮಾನಿಸಲಾಯಿತು.
ಬಲಿಪೂಜೆಯಲ್ಲಿ ಶಿವಮೊಗ್ಗ ಧರ್ಮ ಪ್ರಾಂತ್ಯದ ವಂದನೀಯ ರೋಶನ್‌ ಪಿಂಟೊ ಭಾಗಿಯಾಗಿದ್ದರು. ಪಾಲ್ದನೆ ಚರ್ಚಿನ ಪ್ರಧಾನ ಧರ್ಮ ಗುರು ವಂದನೀಯ ಆಲ್ಬನ್‌ ಡಿ’ಸೋಜಾ, ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್‌ ಮೊಂತೇರೊ, ವಿವಿಧ ಆಯೋಗಗಳ ಸಂಚಾಲಕ ಜೊಸ್ಲಿನ್‌ ಲೋಬೊ, ಲೀಜನ್ ಆಫ್‌ ಮೇರಿ ಸಂಘದ ಅಧ್ಯಕ್ಷೆ ಹೆಲೆನ್‌ ಲೋಬೊ ಉಪಸ್ಥಿತರಿದ್ದರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top