ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯಿಂದ ನೂತನ ಮಹಿಳಾ ಘಟಕ ಉದ್ಘಾಟನೆ

103.3K Views 28 Oct 2024

ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ನೂತನ ಮಹಿಳಾ ಘಟಕವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ನೂತನ ಮಹಿಳಾ ಘಟಕ ಉದ್ಘಾಟಿಸಿ ಮಾತನಾಡಿ, ಸೂಕ್ತ ಕಾರ್ಯ ಯೋಜನೆ ರೂಪಿಸಿ, ಮಹಿಳೆಯರಿಗೆ ಉಪಯುಕ್ತವಾದ ಪುಟ್ಟ ಪುಟ್ಟ ಕಾರ್ಯಕ್ರಮಗಳ ಮೂಲಕ ಮಹಿಳಾ ಘಟಕ ಮುನ್ನಡೆಯಲಿ ಎಂದರು. ನೂತನ ಮಹಿಳಾ ಘಟಕಕ್ಕೆ ಮಾತೃ ಸಂಘದ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.
ಘಟಕದ ಗೌರವ ಸಲಹೆಗಾರರಾದ ಡಾ. ಆಶಾ ಜ್ಯೋತಿ ರೈ ಅವರು ಮಾತನಾಡಿ, ಪರಸ್ಪರ ಸಹಕಾರದಿಂದ ಯಶಸ್ಸು ಸಾಧ್ಯ. ನೂತನ ಮಹಿಳಾ ಘಟಕಕ್ಕೆ ಶುಭವಾಗಲಿ ಎಂದು ಹಾರೈಸಿದರು.


ಮಹಿಳಾ ಘಟಕದ ಅಧ್ಯಕ್ಷೆ ಸಬಿತಾ ಆರ್.ಶೆಟ್ಟಿ ಅವರು ನೂತನ ಮಹಿಳಾ ಘಟಕಕ್ಕೆ ಸರ್ವ ಮಹಿಳೆಯರ ಸಹಕಾರ ದೊರೆಯಲಿ ಎಂದರು.
ವೀಣಾ ಟಿ. ಶೆಟ್ಟಿ ಅವರು ಬಂಟರ ಉಡುಗೆ-ತೊಡುಗೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕಸ್ತೂರಿ ಶೆಟ್ಟಿ ಅವರು ಪ್ರೇಕ್ಷಕ ಮಹಿಳೆಯರಿಗೆ ಆಯೋಜಿಸಿದ ಅತ್ಯುತ್ತಮ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ ನಿರ್ವಹಿಸಿದರು.
ಮಾತೃ ಸಂಘದ ಖಜಾಂಚಿ ಸಿಎ ರಾಮ ಮೋಹನ್ ರೈ, ತಾಲೂಕು ಸಮಿತಿಯ ಉಪ ಸಂಚಾಲಕ ರತ್ನಾಕರ ಶೆಟ್ಟಿ ಎಕ್ಕಾರು, ಮಹಿಳಾ ಘಟಕದ ಉಪಾಧ್ಯಕ್ಷೆ ಸುಲತಾ ಜೆ.ಶೆಟ್ಟಿ, ಕಾರ್ಯದರ್ಶಿ ವೃಂದಾ ಹೆಗ್ಡೆ, ಜತೆ ಕಾರ್ಯದರ್ಶಿ ಮಾನಸ ರೈ, ಕೋಶಾಧಿಕಾರಿ ಭಾರತಿ ಶೆಟ್ಟಿ, ವಿಜಯಲಕ್ಷ್ಮಿ ರೈ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ ಪ್ರಸ್ತಾವನೆಗೈದು, ಸ್ವಾಗತಿಸಿದರು. ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ವೃಂದಾ ಎಸ್.ಹೆಗ್ಡೆ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲಬೈಲ್ ಕಾರ್ಯಕ್ರಮ ನಿರೂಪಿಸಿದರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top