71 ನೇ ಅಖಿಲ ಭಾರತ ಸಹಕಾರ ಸಪ್ತಾಹಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಪ್ರಶಸ್ತಿ

98.6K Views 15 Nov 2024

ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆ ಗಾಗಿ ಪತ್ರಿಕಾ ರಂಗದ ಸಾಧಕ ಪ್ರಶಸ್ತಿ ಯನ್ನು ನವೆಂಬರ್ 16 ರಂದು ಕರಾವಳಿ ಉತ್ಸವ ಮೈದಾನ ದಲ್ಲಿ ನಡೆಯುವ 71 ನೇ ಅಖಿಲ ಭಾರತ ಸಹಕಾರ ಸಪ್ತಾಹ ದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಗೆ ಭಾಜನರಾಗಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಜೂನಿಯರ್ ಚೇಂಬರ್ ಔಟ್ಸ್ ಸ್ಟ್ಯಾಂಡಿಂಗ್ ಯಂಗ್ ಅಚೀವರ್ಸ್ ಅವಾರ್ಡ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top