ಮಂಗಳೂರು ವಿ ವಿ ಅಂತರ್ ಕಾಲೇಜು ಕುಸ್ತಿ ಪಂದ್ಯಾಟ : ಆಳ್ವಾಸ್‌ಗೆ ಸತತ 14 ನೇ ಬಾರಿ ಸಮಗ್ರ ಪ್ರಶಸ್ತಿ

95.4K Views 18 Nov 2024

ಮೂಡುಬಿದಿರೆ: ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 14 ಚಿನ್ನ, 03 ಬೆಳ್ಳಿ ಹಾಗೂ 02 ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.


ಫಲಿತಾಂಶ :
ಪುರುಷರ ವಿಭಾಗದಲ್ಲಿ : ನಿಖಿಲ್ – 61 ಕೆಜಿ ವಿಭಾಗದಲ್ಲಿ (ದ್ವಿತೀಯ), ಗುಡ್ಡಪ್ಪ – 61 ಕೆಜಿ ವಿಭಾಗದಲಿ (ತೃತೀಯ), ರಾಕೇಶ್ – 65 ಕೆಜಿ ವಿಭಾಗದಲ್ಲಿ (ಪ್ರಥಮ), ಶಿವರಾಜು – 70 ಕೆಜಿ ವಿಭಾಗದಲ್ಲಿ (ಪ್ರಥಮ), ಸುರೇಂದ್ರ – 74 ಕೆಜಿ ವಿಭಾಗದಲ್ಲಿ (ದ್ವಿತೀಯ), ಚೇತನ್ – 79 ಕೆಜಿ ವಿಭಾಗದಲ್ಲಿ (ಪ್ರಥಮ), ಕೀರ್ತಿ – 86 ಕೆಜಿ ವಿಭಾಗದಲ್ಲಿ (ಪ್ರಥಮ), ಪ್ರಜ್ವಲ್ – 92 ಕೆಜಿ ವಿಭಾಗದಲ್ಲಿ (ಪ್ರಥಮ), ಕಾರ್ತಿಕ್ – 97 ಕೆಜಿ ವಿಭಾಗದಲ್ಲಿ (ಪ್ರಥಮ), ಬಸವರಾಜು – 97+ ಕೆಜಿ ವಿಭಾಗದಲ್ಲಿ (ಪ್ರಥಮ) ಬಹುಮಾನ ಗಳಿಸಿದ್ದಾರೆ.
ಮಹಿಳೆಯರ ವಿಭಾಗದಲ್ಲಿ : ಶಾಮಲ – 50 ಕೆಜಿ ವಿಭಾಗದಲ್ಲಿ (ಪ್ರಥಮ), ಚಂದ್ರಿಕಾ – 53 ಕೆಜಿ ವಿಭಾಗದಲಿ (ಪ್ರಥಮ), ಮನ್ವಿತಾ – 57 ಕೆಜಿ ವಿಭಾಗದಲ್ಲಿ (ತೃತೀಯ), ಚೈತ್ರಾ – 59 ಕೆಜಿ ವಿಭಾಗದಲ್ಲಿ (ಪ್ರಥಮ), ದೀಪಾ – 62 ಕೆಜಿ ವಿಭಾಗದಲ್ಲಿ (ಪ್ರಥಮ), ಮಾನ್ಯ – 65 ಕೆಜಿ ವಿಭಾಗದಲ್ಲಿ (ಪ್ರಥಮ), ನೇಹಾ – 68 ಕೆಜಿ ವಿಭಾಗದಲ್ಲಿ (ಪ್ರಥಮ), ವೈಶಾಲಿ – 72 ಕೆಜಿ ವಿಭಾಗದಲ್ಲಿ (ದ್ವಿತೀಯ), ಧನ್ಯಾ- 76 ಕೆಜಿ ವಿಭಾಗದಲ್ಲಿ (ಪ್ರಥಮ) ಬಹುಮಾನ ಗಳಿಸಿದ್ದಾರೆ.
ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವರು ಅಭಿನಂದಿಸಿದ್ದಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top