ಖ್ಯಾತ ಉದ್ಯಮಿ, ನಿಸ್ವಾರ್ಥ ಸಮಾಜ ಸೇವಕ ಪ್ರವೀಣ್ ಶೆಟ್ಟಿ ಪುತ್ತೂರು ದಂಪತಿಗಳಿಗೆ ತುಳುಕೂಟ ಬೆಳ್ಳಿಹಬ್ಬ ಸಂಭ್ರಮದಲ್ಲಿ ಸನ್ಮಾನ

112.9K Views 20 Nov 2024

ಪುಣೆ: ಪುಣೆ ಬಂಟರ ಸಂಘದ ಉಪಾಧ್ಯಕ್ಷ, ತುಳುಕೂಟ ಪುಣೆಯ ಬೆಳ್ಳಿ ಹಬ್ಬ ಸಂಭ್ರಮದ ಗೌರವಾಧ್ಯಕ್ಷ,ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, 2024 ರ ಸಾಲಿನ ಬಂಟರತ್ನ ಪ್ರಶಸ್ತಿ ಪುರಸ್ಕೃತ, ಆರ್ಯಭಟ ಪ್ರಶಸ್ತಿ ಪುರಸ್ಕೃತ, ಪುಣೆಯ ಖ್ಯಾತ ಉದ್ಯಮಿ, ನಿಸ್ವಾರ್ಥ ಸಮಾಜಸೇವಕ ಪ್ರವೀಣ್ ಶೆಟ್ಟಿ ಪುತ್ತೂರು ದಂಪತಿಗಳನ್ನು ತುಳುಕೂಟ ಪುಣೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಂಆರ್ ಜಿ ಗ್ರೂಪ್ ನ ಸಿಎಂಡಿ ಡಾ.ಕೆ.ಪ್ರಕಾಶ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ತುಳುಕೂಟದ ಅಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು, ಕಾರ್ಯದರ್ಶಿ ರೋಹಿತ್ ಶೆಟ್ಟಿ ನಗ್ರಿಗುತ್ತು ಇವರುಗಳು ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭ ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ದ.ಕ.ಸಂಸದ ಬ್ರಜೇಶ್ ಚೌಟ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Read More News

Scroll to Top