‘ಕಲಾ ಪರ್ಬ’ದ ಲಾಂಛನ ಬಿಡುಗಡೆ

110.3K Views 21 Nov 2024

ಮಂಗಳೂರು: ಶರಧಿ ಪ್ರತಿಷ್ಠಾನದ ವತಿಯಿಂದ ಜ.11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ನಡೆಯಲಿರುವ ‘ಕಲಾ ಪರ್ಬ’ದ ಲಾಂಛನ ಮತ್ತು ಕರಪತ್ರವನ್ನು ಬುಧವಾರ ನಗರದ ವಿಷ್ಣು ವೈಭವ ಹೊಟೇಲ್‌ನಲ್ಲಿ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ಎಳೆಯ ಕಲಾವಿದರಿಗೆ ಸ್ಪೂರ್ತಿ ನೀಡಲು ‘ಕಲಾ ಪರ್ಬ’ ಆಯೋಜಿಸಿರುವುದು ಶ್ಲಾಘನೀಯ. ಕದ್ರಿ ಪಾರ್ಕ್‌ನ ಒಟ್ಟು ಅಭಿವೃದ್ದಿ ಹಾಗೂ ಪಾರ್ಕ್‌ನ ಒಳಗೆ ವಿವಿಧ ಕಲಾ ಚಟುವಟಿಕೆಗೆ ಅವಕಾಶ ಕಲ್ಪಿಸಲು 1 ಕೋಟಿ ರೂ. ಮೀಸಲಿಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು. ಕಲಾಪರ್ಬ ಸಹಿತ ವಿವಿಧ ಕಲಾ ಚಟುವಡಿಕೆಗಳಿಗೆ ಪೂರಕವಾಗುವ ಕಾರ್ಯ ನಿಟ್ಟಿನಲ್ಲಿ ವಿಶೇಷ ಆದ್ಯತೆ ನೀಡಲಾಗುವುದು ಎಂದು ಸ್ಪೀಕರ್ ಯು.ಟಿ.ಖಾದರ್ ಈ ಸಂದರ್ಭ ತಿಳಿಸಿದರು.
ಸಂಘಟಕ ಪುನೀಕ್ ಶೆಟ್ಟಿ ಮಾತನಾಡಿ, ಕಲಾವಿದರೆಲ್ಲರನ್ನೂ ಒಗ್ಗೂಡಿಸಿ ವಿವಿಧ ಕಲಾ ಪ್ರಕಾರಗಳನ್ನು ಒಂದೇ ಕಡೆ ಅಭಿವ್ಯಕ್ತ ಪಡಿಸುವ ಹಾಗೂ ತನ್ಮೂಲಕ ಕಲಾ ಕ್ಷೇತ್ರ ಇನ್ನಷ್ಟು ವಿಕಸನವಾಗುವ ಉದ್ದೇಶದಿಂದ ಕಲಾ ಪರ್ಬ ಆಯೋಜಿಸಲಾಗುತ್ತಿದೆ .ಸುಮಾರು 200 ಮಳಿಗೆಗಳಲ್ಲಿ ಕಲಾಕೃತಿ, ಛಾಯಾ ಚಿತ್ರ, 30 ಮಳಿಗೆಗಳಲ್ಲಿ ಶಿಲ್ಪ ಕಲಾ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನಡೆಯಲಿದೆ ಎಂದರು.
ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಶರಧಿ ಪ್ರತಿಷ್ಟಾನದ ಮಾರ್ಗದರ್ಶಕ ರಮೇಶ್ ನಾಯಕ್, ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಚಿತ್ರ ಕಲಾವಿದರಾದ ಕೋಟಿಪ್ರಸಾದ್ ಆಳ್ವ, ಗಣೇಶ್ ಸೋಮಯಾಜಿ, ರಾಜೇಂದ್ರ ಕೇದಿಗೆ, ಶ್ರೀಧರ ಹೊಳ್ಳ, ರಾಧಾಕೃಷ್ಣ ಭಟ್ ಮುಂತಾದವರು ಉಪಸ್ಥಿತರಿದ್ದರು. ಚಿತ್ರ ಕಲಾವಿದ ದಿನೇಶ್ ಹೊಳ್ಳ ಕಾರ್ಯಕ್ರಮ ನಿರೂಪಿಸಿದರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top