ಪತ್ರಕರ್ತರ ಸಮ್ಮೇಳನದ ಆಮಂತ್ರಣ ‌ಪತ್ರಿಕೆ ಬಿಡುಗಡೆ

101.2K Views 30 Nov 2024

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿ.5ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ಪತ್ರಕರ್ತರ 5ನೇ ಜಿಲ್ಲಾ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.ಅವರು ಶನಿವಾರ ಬಿಡುಗಡೆಗೊಳಿಸಿದರು.
ಶಾಸಕ ಡಾ.ವೈ.ಭರತ್ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಡಾ ಆಯುಕ್ತೆ
ನೂರ್ ಜಹರಾ ಖಾನಂ ಮುಖ್ಯ ಅತಿಥಿಗಳಾಗಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ .ಬಿ.ಎನ್ ಉಪಸ್ಥಿತರಿದ್ದರು.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top