ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದಿಂದ ಅವಲೋಕನ. ತುಳು ಕಾದಂಬರಿ ಗತಿ ಬದಲಾಯಿಸಿದ ‘ನಾಣಜ್ಜೆರ್…’

99.8K Views 30 Nov 2024

ಮೂಡುಬಿದಿರೆ: ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್ ಸುದೆ ತಿರ್ಗಾಯೆರ್ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಶೈಕ್ಷಣಿಕ) ಡಾ. ಟಿ. ಕೆ. ರವೀಂದ್ರನ್ ಹೇಳಿದರು.
ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ನಡೆದ ‘ಡಾ. ಮಹಾಲಿಂಗ ಭಟ್ ಬರೆದ ನಾಣಜ್ಜೆರ್ ಸುದೆ ತಿರ್ಗಾಯೆರ್’ ಕಾದಂಬರಿಯ ಅವಲೋಕನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತುಳು ಭಾಷೆಯು ತಮಿಳಿನಷ್ಟೇ ಪುರಾತನವಾದ ಭಾಷೆ. ಪ್ರಪಂಚದಾದ್ಯAತ ಒಂದು ಕೋಟಿಗೂ ಹೆಚ್ಚು ತುಳು ಭಾಷಿಕರಿದ್ದಾರೆ. ಸಂಗಮ ಸಾಹಿತ್ಯದಲ್ಲೂ ತುಳು ಭಾಷೆಯ ಉಲ್ಲೇಖವಿದೆ ಎಂದರು.
ತಮ್ಮ ಭಾಷೆಯ ಮೇಲೆ ಯಾರಿಗೂ ಕೀಳರಿಮೆ ಇರಬಾರದು. ತುಳು ಭಾಷಿಕರು ಸಾಹಿತ್ಯಕ್ಕೆ ಹೆಚ್ಚಿನ ಒಲವು ನೀಡದೇ ಇರುವುದರಿಂದ ಸಾಹಿತ್ಯದಲ್ಲಿ ತುಳು ಭಾಷೆಯು ಹಿಂದುಳಿದಿದೆ. ತುಳು ಭಾಷಿಕರು ತುಳು ಭಾಷೆಯನ್ನು ಉತ್ತೇಜಿಸಬೇಕು ಎಂದು ತಿಳಿಸಿದರು.
‘ನಾಣಜ್ಜೆರ್ ಸುದೆ ತಿರ್ಗಾಯೆರ್’ ಕೃತಿಯು ತುಳು ಸಾಹಿತ್ಯದ ಸ್ಥಿತಿಯನ್ನೇ ಬದಲಾಯಿಸಿದ ಕೃತಿಯಾಗಿದೆ. ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕೃತಿ ಇದಾಗಿದ್ದು. ತುಳು ಸಾಹಿತ್ಯವು ಈ ಕೃತಿಯ ನಂತರ ತಿರುವು ಪಡೆದುಕೊಂಡಿದೆ ಎಂದರು.
ವಾಣಿಜ್ಯ ವೃತ್ತಿಪರ ವಿಭಾಗದ ಸಂಯೋಜಕ ಅಶೋಕ್ ಕೆ. ಜಿ. ಇದ್ದರು. ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಯೋಗೀಶ್ ಕೈರೋಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅನೀಶಾ ಶೆಟ್ಟಿ ವಂದಿಸಿದರು.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top