ಸಮಾಜ ಸೇವಕ ಯು.ಆರ್. ಶೆಟ್ಟಿ ಅವರಿಗೆ ಕರ್ನಾಟಕ ಮುಕುಟಮಣಿ ಪ್ರಶಸ್ತಿ ಪ್ರದಾನ

115.9K Views 3 Dec 2024

ಮಂಗಳೂರಿನಲ್ಲಿ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಯು.ಆರ್. ಶೆಟ್ಟಿ ಅವರಿಗೆ ಕರ್ನಾಟಕ ಮುಕುಟಮಣಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಶ್ರೀ ಸಾಲಿಗ್ರಾಮ ಗಣೇಶ್ ಶನೈ ಅವರ ನೇತೃತ್ವದ ಕಲಾ ಕುಂಚ ದಾವಣಗೆರೆ ಇವರು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದಾವಣಗೆರೆಯ ಚೆನ್ನಗಿರಿ ವಿರೂಪಾಕ್ಷಪ್ಪ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.


ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಯು. ಆರ್. ಶೆಟ್ಟಿ ಯವರು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ವಿವಿಧ ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿರುವ ಇವರು ನಾಟಕ ಕಲಾವಿದರಾಗಿ ಜನಪ್ರಿಯ ರಾಗಿದ್ದಾರೆ. ಇವರ ನೇತೃತ್ವದ ನಾಟಕ ತಂಡ ಸರಕಾರಿ ನೌಕರರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿದೆ.


ಇವರ ಸಮಾಜಮುಖಿ ಸೇವೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ದಾವಣಗೆರೆಯ ಕಲಾ ಕುಂಚ ಸಂಸ್ಥೆ ಇವರಿಗೆ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top