ಕನ್ನಡ ಭವನ ಕಾಸರಗೋಡಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ಸಂಘಟಕಿ, ಲೇಖಕಿ, ಕವಯತ್ರಿ ರೇಖಾ ಸುದೇಶ್ ರಾವ್ ಆಯ್ಕೆ.

115.7K Views 12 Dec 2024

ಕಾಸರಗೋಡು: ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ, ವಿಶ್ವ ಸಾಹಿತ್ಯ ಬಳಗದ ಸಂಚಾಲಕಿಯಾಗಿ, ಸಾಹಿತ್ಯ, ಸಾಮಾಜಿಕ ಸೇವಾ ಧರ್ಮವನ್ನು ನಿರಂತರತೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ರೇಖಾ ಸುದೇಶ್ ರಾವ್ ಅವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷಯಾಗಿ ಆಯ್ಕೆ ಮಾಡಲಾಗಿದೆ.
ಕನ್ನಡ ಭವನದ “ರಜತ ಸಂಭ್ರಮ “ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡಪರ ಕಾರ್ಯಕ್ರಮ ಹಾಗೂ “ಮನೆಗೊಂದು ಗ್ರಂಥಾಲಯ,-ಪುಸ್ತಕ ಸತ್ಯ -ಪುಸ್ತಕ ನಿತ್ಯ, ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು ಕಾಸರಗೋಡು ಕನ್ನಡ ಭವನದ ನಿರ್ದೇಶಕ ಡಾ. ಕೊಲಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದ್ದು ಕನ್ನಡ ಭವನದ ಗೌರವ ಅಧ್ಯಕ್ಷ ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು.
ಸರ್ವಾನುಮತಿಯಿಂದ ಆಯ್ಕೆಯಾದ ಶ್ರಿಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ(ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕನ್ನಡ ಭವನ “ರಜತ ಸಂಭ್ರಮ “2025 ಈ ಮೇಲಿನ ಕಾರ್ಯಕ್ರಮ ಸಂಯೋಜನೆಯ ಜವಾಬ್ದಾರಿ ಸ್ವೀಕರಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ ನಿರ್ವಹಿಸಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ ವಾಮನ್ ರಾವ್ ಬೇಕಲ್ ಹಾಗೂ ಕೋಶಾಧಿಕಾರಿ ಸಂದ್ಯಾ ರಾಣಿ ಟೀಚರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top