ಕ್ಲಾಟ್ (ಸಿಎಲ್‌ಎಟಿ)- 2025 ಫಲಿತಾಂಶ: ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ.

108K Views 12 Dec 2024

ವಿದ್ಯಾಗಿರಿ: ಕ್ಲಾಟ್ ಒಕ್ಕೂಟವು 1ನೇ ಡಿಸೆಂಬರ್ 2024 ರಂದು ನಡೆಸಿದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್‌ಎಟಿ) 2025 ರಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಾದ ಅಹನಾ ಎಂ.ಕೆ., ಕಾರ್ತಿಕ್ ಆರ್. ಮಳಲಿ ಮತ್ತು ಅಭಿನವ್ ಎಂ.ಎಸ್. ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಪ್ರತಿಷ್ಠಿತ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಿಗೆ ಪ್ರವೇಶ ಗಳಿಸಿದ್ದಾರೆ.
ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಶಿಸ್ತು, ಬದ್ಧತೆ ಸಂಸ್ಥೆಗೆ ಹೆಮ್ಮೆ ತಂದಿದೆ. ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಗಳು ವಿವಿಧ ಶೈಕ್ಷಣಿಕ ಮತ್ತು ಸ್ಪರ್ಧಾತ್ಮಕ ಕ್ಷೇತ್ರಗಳಲ್ಲಿ ನಿರಂತರವಾಗಿ ಅಸಾಧಾರಣ ಫಲಿತಾಂಶಗಳನ್ನು ನೀಡುತ್ತಿದೆ. ಸಮಗ್ರ ಕಲಿಕೆ ಮತ್ತು ವೈಯಕ್ತಿಕ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತಿದೆ . ವಿದ್ಯಾರ್ಥಿಗಳ ಅದ್ಭುತ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಪ್ರಾಚರ‍್ಯ ಮಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಮ್‌ಡಿ ಅಭಿನಂದಿಸಿದ್ದಾರೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

ದುಬೈಯ ಹೆಸರಾಂತ ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಪ್ರಸ್ತುತಪಡಿಸುವ ಬಹು ನಿರೀಕ್ಷೆಯ ತುಳು ಚಲನಚಿತ್ರ “ಡಾ. ಮೋಹನ್ ಎಂಬಿಬಿಎಸ್” ಡಿಸೆಂಬರ್ ನಲ್ಲಿ ತೆರೆಗೆ. ಇದು ಕಾರ್ಪೊರೇಟ್ ವೈದ್ಯಕೀಯ ಮಾಫಿಯಾದ ವಿರುದ್ಧ ಸಿಡಿದೆದ್ದ ನಿಷ್ಠಾವಂತ ವೈದ್ಯನೊಬ್ಬನ ಕಥೆ .ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶನದ ಡಾ.ಸುಧಾಕರ್ ಶೆಟ್ಟಿ ಪುಣೆ- ಮೂಡಬಿದ್ರಿ ಪರಿಕಲ್ಪನೆಯ ಸಿನಿಮಾ.

Scroll to Top