ದರ್ಶನ್, ಪವಿತ್ರ ಗೌಡ ಸಹಿತ 7 ಮಂದಿ ಆರೋಪಿಗಳಿಗೆ ರೆಗ್ಯುಲರ್ ಜಾಮೀನು.

113.3K Views 13 Dec 2024

ವರದಿ: ಡಾ. ಅಶೋಕ್ ಶೆಟ್ಟಿ ಬಿ. ಎನ್.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲ್ ಸೇರಿರುವ ದರ್ಶನ್, ಪವಿತ್ರಗೌಡ ಸಹಿತ 7 ಮಂದಿ ಆರೋಪಿಗಳಿಗೆ ಹೈಕೋರ್ಟ್ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ. ಇದು ಶರ್ತಬದ್ದ ಜಾಮೀನು ಆಗಿದ್ದು, ದರ್ಶನ್ ಬೆನ್ನು ನೋವಿನ ಕಾರಣವೊಡ್ಡಿ ಬೆನ್ನು ಶಸ್ತ್ರ ಚಿಕಿತ್ಸೆ ಮಾಡಲಿಕ್ಕಿದೆಯೆಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೂ, ಮಧ್ಯಾoತರ ಜಾಮೀನು ಮೇಲೆ ಹೊರಗಿದ್ದಾರೆ. ರೆಗ್ಯುಲರ್ ಜಾಮೀನು ಇವತ್ತು ಸಿಕ್ಕಿರುವುದ್ದರಿಂದ ಅವರಿನ್ನೂ ಬೆನ್ನು ಆಪರೇಷನ್ ಮಾಡುವುದು ಡೌಟ್ ಎನ್ನಲಾಗುತ್ತಿದೆ. ದರ್ಶನ್ ಗೆ ಜಾಮೀನು ಸಿಕ್ಕ ಕೂಡಲೇ ಪೊಲೀಸ್ ಇಲಾಖೆ ಸಭೆ ಸೇರಿ ಮೇಲ್ಮನವಿ ಸಲ್ಲಿಸುವ ಕುರಿತು ಮುಂದಿನ ಹೆಜ್ಜೆಗಳ ಬಗ್ಗೆ ರೂಪುರೇಷೆ ಹಾಕಿ ಕೊಂಡಿದೆ. ಈ ಮದ್ಯೆ ರೇಣುಕಾಸ್ವಾಮಿ ಪತ್ನಿಗೆ ಸರಕಾರಿ ಉದ್ಯೋಗ ನೀಡಬೇಕೆಂದು ರೇಣುಕಾಸ್ವಾಮಿಯ ಚಿಕ್ಕಪ್ಪ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಪ್ರಸ್ತಾಪಿಸಿದ್ದಾರೆ.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top