ಡಿ.18ರಂದು ಗಿರೀಶ್ ಭಾರದ್ವಾಜ್ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

108.5K Views 16 Dec 2024

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಡಿ.18ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ
ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ತೂಗು ಸೇತುವೆಗಳ ಸರದಾರ , ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಅವರು ಭಾಗವಹಿಸಿ ಸಂವಾದ ನಡೆಸಲಿದ್ದಾರೆ.
ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top