ಆಳ್ವಾಸ್ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಕಾಲೇಜು. ಶೈಕ್ಷಣಿಕ ವಿನಿಮಯ: ಜಪಾನ್ ಸೋಜೊ ವಿಶ್ವವಿದ್ಯಾಲಯ ಜೊತೆ ಆಳ್ವಾಸ್ ಒಡಂಬಡಿಕೆ.

94.9K Views 18 Dec 2024

ಮೂಡುಬಿದಿರೆ: ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿAಗ್ ಜೊತೆ ಆಳ್ವಾಸ್ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಕಾಲೇಜು ಮಹತ್ವದ ಶೈಕ್ಷಣಿಕ ವಿನಿಮಯ ಒಡಂಬಡಿಕೆ ಸೋಮವಾರ ಮಾಡಿಕೊಂಡಿತು.
ಶಿಕ್ಷಣ, ಸಂಶೋಧನೆ, ಬೋಧಕ, ಆಡಳಿತ ವರ್ಗ, ಸಂಶೋಧನಾ ಪ್ರಕಟಣೆಗಳು ಸೇರಿದಂತೆ ವಿವಿಧ ವಲಯದಲ್ಲಿ ಪರಸ್ಪರ ಸ್ವಾತಂತ್ರö್ಯವನ್ನು ಕಾಯ್ದುಕೊಂಡು ವಿನಿಮಯ, ಬೌದ್ಧಿಕ ಆಸ್ತಿಗಳ ರಕ್ಷಣೆ ಸೇರಿದಂತೆ ಶೈಕ್ಷಣಿಕ ಅಭ್ಯುದಯದ ದೃಷ್ಟಿಯ ಐದು ವರ್ಷಗಳ ಒಪ್ಪಂದಕ್ಕೆ ಆಳ್ವಾಸ್ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಹಾಗೂ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿAಗ್ ಅಧ್ಯಕ್ಷ ಡಾ.ನಗಾಟೊ ಒನೊ ಸಹಿ ಮಾಡಿದರು.
ಶೈಕ್ಷಣಿಕ ವಿನಿಮಯಕ್ಕೆ ಸಂಬAಧಿಸಿದ ಬೋಧನೆ, ವಸತಿ ಸೌಕರ್ಯ, ಆರ್ಥಿಕ ಜವಾಬ್ದಾರಿ, ಬೌದ್ಧಿಕ ಆಸ್ತಿ ರಕ್ಷಣೆ, ಅವಧಿ, ತಿದ್ದುಪಡಿ ಸೇರಿದಂತೆ ಪ್ರಮುಖ ವಿಚಾರಗಳನ್ನು ಒಡಂಬಡಿಕೆ ಒಳಗೊಂಡಿದೆ.
ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿAಗ್‌ನ ಪರಿಣಾಮಕಾರಿ ಎಂಜಿನಿಯರಿAಗ್‌ನ ಪ್ರಗತಿ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ.ರುಚಿ ಥೋಮೊಶಿಗೆ, ಸೋಜೊ ಅಂತರರಾಷ್ಟಿçÃಯ ಕೇಂದ್ರದ ವ್ಯವಸ್ಥಾಪಕಿ ಮಿಯೆ ಒಕುಬೊ, ಮೆಕ್ಯಾನಿಕಲ್ ಎಂಜಿನಿಯರಿAಗ್ ಪ್ರಾಧ್ಯಾಪಕ ಡಾ.ಅಕಿಸಾ ಮೊರಿ ಹಾಗೂ ಆಳ್ವಾಸ್ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಕಾಲೇಜು ಮ್ಯಾಕಾನಿಕಲ್ ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ ಇದ್ದರು. ಡಾ ಗುರಶಾಂತ್ ವಗ್ಗರ್ ಕರ‍್ಯಕ್ರಮ ನಿರೂಪಿಸಿದರು.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top