2025 ಜೂನ್ 1ರಂದು ಯಕ್ಷಧ್ರುವ ಪಟ್ಲ ದಶಮಾನೋತ್ಸವ ಸಂಭ್ರಮ. ಸಮಲೋಚನಾ ಸಭೆಯಲ್ಲೇ ರೂ 1-00 ಕೋಟಿ ದೇಣಿಗೆ ಘೋಷಿಸಿದ ಶಶಿಧರ ಶೆಟ್ಟಿ ಬರೋಡ

97.9K Views 28 Dec 2024

ಕರಾವಳಿಯ ಯಕ್ಷಗಾನ ಕಲೆಯನ್ನು ಪ್ರಸ್ತುತ ಕಾಲಘಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಪಸರಿಸುತ್ತಿರುವ ಹಾಗೂ ತನ್ಮೂಲಕ ಯಕ್ಷಗಾನದ ಕಲಾವಿದರಿಗಲ್ಲದೆ ಇತರೇ ವಿವಿಧ ಪ್ರಕಾರದ ಅಶಕ್ತರ ಬಾಳಿಗೆ ಬೆಳಕಾಗಿ ಮೂಡಿಬಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ 10ನೇ ವರ್ಷದ ಪಟ್ಲ ಸಂಭ್ರಮ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಜರಗಿಸುವ ಕುರಿತಾಗಿ ಫೌಂಡೇಶನಿನ ಮಹಾದಾನಿಗಳ, ಮಹಾಪೋಷಕರ, ಟ್ರಸ್ಟಿಗಳ, ವಿವಿಧ ಪ್ರಾದೇಶಿಕ ಘಟಕಗಳ ಪದಾಧಿಕಾರಿಗಳ ಹಾಗೂ ಪಟ್ಲ ಅಭಿಮಾನಿಗಳ ಸಮಲೋಚನಾ ಸಭೆಯು ನಗರದ ಪ್ರತಿಷ್ಠಿತ ಗೋಲ್ಡ್ ಪಿಂಚ್ ಹೋಟೆಲ್ ಸಭಾಂಗಣದಲ್ಲಿ ಜರಗಿತು.
ಸಭೆಯ ವೇದಿಕೆಯಲ್ಲಿ ಟ್ರಸ್ಟಿನ ಗೌರವಾಧ್ಯಕ್ಷರು /ಮಹಾದಾನಿಗಳಾದ ಶ್ರೀ ಕನ್ಯಾನ ಸದಾಶಿವ ಶೆಟ್ಟಿ, ಡಾ. ಕೆ ಪ್ರಕಾಶ್ ಶೆಟ್ಟಿ(MRG Group), ಟ್ರಸ್ಟಿನ ಸಂಚಾಲಕರಾದ ಶ್ರೀ ಐಕಳ ಹರೀಶ್ ಶೆಟ್ಟಿ ,ಮಹಾ ಪೋಷಕರಾದ ಶ್ರೀ ಕೆ. ಎಂ. ಶೆಟ್ಟಿ, ಶ್ರೀ ತೋನ್ಸೆ ಆನಂದ ಶೆಟ್ಟಿ, ಶ್ರೀ ಅಶೋಕ್ ಶೆಟ್ಟಿ ಬೆಳ್ಳಾಡಿ, ಶ್ರೀ ಸಂತೋಷ್ ಶೆಟ್ಟಿ ಪೂನಾ, ಶ್ರೀ ಕರ್ನಿರೆ ವಿಶ್ವನಾಥ ಶೆಟ್ಟಿ, ಶ್ರೀ ಸವಣೂರು ಸೀತಾರಾಮ ರೈಯವರು ಉಪಸ್ಥಿತರಿದ್ದು ದಶಮಾನೋತ್ಸವ ಸಂಭ್ರಮವು ಸಮಾಜಕ್ಕೆ ಮಾದರಿಯಾಗುವಂತಹ ಕಾರ್ಯಕ್ರಮವಾಗಲಿ, ಕಾರ್ಯಕ್ರಮದ ಯಶಸ್ಸಿಗೆ ಗರಿಷ್ಠ ಮೊತ್ತದ ದೇಣಿಯನ್ನು ನೀಡಿ ಸಹಕರಿಸಲಾಗುವುದೆಂದು ತಿಳಿಸಿದರು.

ಯಕ್ಷಧ್ರುವ ಪಟ್ಲ ಫೌಂಡೇಶನಿನ ಮಹಾದಾನಿಗಳಾದ ಶಶಿಧರ ಶೆಟ್ಟಿ ಬರೋಡ ದಶಮಾನೋತ್ಸವ ಕಾರ್ಯಕ್ರಮದ ಮೂಲಕ ನಮ್ಮ ಪಟ್ಲ ಫೌಂಡೇಶನ್ನು ಸುಭಧ್ರಗೊಳಿಸುವ ಮತ್ತು ಅದರ ಮುಂದಿನ ಯೋಜನಾ ಕಾರ್ಯಕ್ರಮಗಳನ್ನು ನಿರಂತರವಾಗಿ ವ್ಯವಸ್ಥಿತ ರೀತಿಯಲ್ಲಿ ಮುಂದುವರಿಸುವ ನಿಟ್ಟಿನಲ್ಲಿ ಸುಮಾರು 10-00 ಕೋಟಿ ಮೊತ್ತದ ದೇಣಿಗೆಯನ್ನು ಮುಂಗಡವಾಗಿ ಸಂಗ್ರಹಿಸುವುದು ಉತ್ತಮವೆಂದು ತಿಳಿಸಿ ಪ್ರಥಮ ಹೆಜ್ಜೆಯಾಗಿ ತಾನು ರೂ 1-00 ಕೋಟಿ ಮೊತ್ತವನ್ನು ದೇಣಿಗೆಯ ರೂಪದಲ್ಲಿ ನೀಡುವುದಾಗಿ ಎಂದು ಘೋಷಣೆ ಮಾಡಿದರು.
ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ಇವತ್ತಿನ ವರೆಗೂ ಫೌಂಡೇಶನಿಗೆ ಸಹಕರಿಸಿದ ಸರ್ವರಿಗೂ ಅಭಿನಂದನೆ ಸಲ್ಲಿಸುವುದರೊಂದಿಗೆ, ಈಗಾಗಲೇ ಟ್ರಸ್ಟಿಗೆ 1-00 ಕೋಟಿ ಮೊತ್ತವನ್ನು ನೀಡಿ ಮಹಾದಾನಿಯಾಗಿರುವ ಶಶಿಧರ ಶೆಟ್ಟಿಯವರು ದಶಮಾನೋತ್ಸವ ಕಾರ್ಯಕ್ರಮಕ್ಕೂ 1-00 ಕೋಟಿ ದೇಣಿಗೆಯ ಘೋಷಣೆಗೆ ಶಿರಬಾಗಿ ಕೃತಜ್ಞತೆಯನ್ನು ಸಲ್ಲಿಸಿದರು.
ಯಕ್ಷಧ್ರುವ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮವು 2025ರ ಜೂನ್ 1ರಂದು ಅಡ್ಯಾರ್ ಗಾರ್ಡನ್ ಇಲ್ಲಿ ಜರಗಲಿದ್ದು , ದಶಮಾನೋತ್ಸವ ಸಂಭ್ರಮಕ್ಕೆ ರಚಿಸಲಾಗುವ ಸಮಿತಿಗೆ ಗೌರವಾಧ್ಯಕ್ಷರಾಗಿ ಕೊಡುಗೈದಾನಿ, ಫೌಂಡೇಶನಿನ ಮಹಾದಾನಿ ಡಾ. ಕೆ ಪ್ರಕಾಶ್ ಶೆಟ್ಟಿ (MRG Group) ಹಾಗೂ ಅಧ್ಯಕ್ಷರಾಗಿ ಶಶಿಧರ ಶೆಟ್ಟಿ ಬರೋಡ ಇವರುಗಳ ಹೆಸರನ್ನು ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀಮತಿ ಪೂರ್ಣಿಮ ಶಾಸ್ತ್ರಿ, ಶ್ರೀ ಲೋಕನಾಥ ಶೆಟ್ಟಿ, ಶ್ರೀ ವಿನಿತ್ ಕುಮಾರ್ ಶೆಟ್ಟಿ ಫೌಂಡೇಶನಿನ ಟ್ರಸ್ಟಿಗಳಾಗಿ ಸೇರ್ಪಡೆಗೊಂಡರು.
ಗೃಹ ನಿರ್ಮಾಣಕ್ಕಾಗಿ ರೂ15 ಲಕ್ಷ ರೂಪಾಯಿ ಮೊತ್ತವನ್ನು 9 ಮಂದಿ ಕಲಾವಿದರಿಗೆ ವಿತರಿಸಲಾಯಿತು.
2025ರ ಜನವರಿ 8ರಂದು ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ರವರ ಒಡೆತನದ ಒಡ್ಡೂರು ಫಾರ್ಮಿನಲ್ಲಿ ನಡೆಯಲಿರುವ ಯಕ್ಷ ಶಿಕ್ಷಣ ವಿದ್ಯಾರ್ಥಿ ಸಮ್ಮಿಲನದ ಬಗ್ಗೆ ಬಂಟ್ವಾಳ ಘಟಕದ ಅಧ್ಯಕ್ಷರಾದ ಶ್ರೀ ಚಂದ್ರಹಾಸ ಶೆಟ್ಟಿಯವರು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಫೌಂಡೇಶನಿನ ಕೋಶಾಧಿಕಾರಿಯವರಾದ ಸಿಎ ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿಗಳಾದ ಅಡ್ಯಾರ್ ಪುರುಷೋತ್ತಮ ಕೆ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top