ಉಳ್ಳಾಲ ಮಂಜನಾಡಿ ಗ್ಯಾಸ್ ದುರಂತ, ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಬಾಲಕಿ ಮೃತ್ಯು, ಯು ಟಿ ಖಾದರ್ ಸಂತಾಪ

106.1K Views 29 Dec 2024

ಉಳ್ಳಾಲ: ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ,ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಯಿಝ(9) ಡಿಸೆಂಬರ್ 28ರಂದು ಮೃತಪಟ್ಟಿದ್ದು,ಸಭಾಧ್ಯಕ್ಷ ಯು.ಟಿ ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕುಟುಂಬಸ್ಥರು,
ಸ್ಥಳೀಯರು ನಾವೆಲ್ಲರೂ ಸೇರಿ ಗಾಯಾಳುಗಳ ರಕ್ಷಣೆಗಾಗಿ ಶಕ್ತಿ ಮೀರಿ ಪ್ರಯತ್ನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಮನಸ್ಸಿಗೆ ಬಹಳ ಆಘಾತ ತಂದಿದೆ.ಅಲ್ಲಾಹು ಅವರ ಖಬರ್ ವಿಶಾಲವಾಗಿರಿಸಲಿ,ಕುಟುಂಬಸ್ಥರಿಗೆ,
ಹಿತೈಷಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲು ಪ್ರಾರ್ಥಿಸುತ್ತೇನೆಂದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಅಲ್ಲದೆ ದುರಂತ ಸಂಭವಿಸಿದ ದಿನದಿಂದ ಇಂದಿನವರೆಗೂ ಸುಮಾರು ದಿನಗಳ ಕಾಲ ಕುಟುಂಬಸ್ಥರ ಜತೆಗಿದ್ದ ಸ್ಥಳೀಯ ಮುಖಂಡರಿಗೂ,ಸಂಘ ಸಂಸ್ಥೆಗಳ ಕಾರ್ಯ ವೈಖರಿ ಎಲ್ಲರಿಗೂ ಮಾದರಿ ಎಂದವರು ತಿಳಿಸಿದರು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top