ಪುಣೆ ಬಂಟರ ಸಂಘದ ಸುವರ್ಣಮಹೋತ್ಸವಕ್ಕೆ ಸುರತ್ಕಲ್ ಬಂಟರ ಸಂಘದಿಂದ ಸಾಂಸ್ಕೃತಿಕ ಕಾರ್ಯಕ್ರಮ, ಮುಹೂರ್ತ ಸಮಾರಂಭ

118.7K Views 5 Jan 2025

ಸುರತ್ಕಲ್: ಜನವರಿ 26 ರಂದು ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವಕ್ಕೆ ಸುರತ್ಕಲ್ ಬಂಟರ ಸಂಘದಿಂದ ನೀಡುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬಂಟರಭವನದಲ್ಲಿ ಮಹೂರ್ತ ನೆರವೇರಿತು. ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿ ಚೆಯರ್ ಮೆನ್ ಕರುಣಾಕರ ಎಂ ಶೆಟ್ಟಿ ಮದ್ಯಗುತ್ತು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಾವು ನೀಡುವ ಕಾರ್ಯಕ್ರಮದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಅದಕ್ಕೆ ಪೂರಕವಾಗಿ ಶಿಸ್ತು ಏಕಾಗ್ರತೆ ಛಲಗಳಿಂದ ಸಾಧಿಸಿದಾಗ ಯಶಸ್ಸು ನಮ್ಮದಾಗುತ್ತದೆ. ಪುಣೆಯಲ್ಲಿ ಸುರತ್ಕಲ್ ಬಂಟರ ಸಂಘದ ಸದಸ್ಯರು ನೀಡುವ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಲಿ, ಕಾರ್ಯಕ್ರಮಕ್ಕೆ ತನ್ನಿಂದಾದ ಸಹಾಯ ಮಾಡುವುದಾಗಿ ಶುಭ ಹಾರೈಸಿದರು.
ಮಾಜಿ ಅಧ್ಯಕ್ಷ ಎಂ ದೇವಾನಂದ ಶೆಟ್ಟಿ ಮಾತನಾಡಿ ಸತತ ಪರಿಶ್ರಮ ಪಟ್ಟಾಗ ನಮ್ಮ ಗೆಲುವನ್ನು ತಡೆಯಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ರಂಗದಲ್ಲಿ ಸುರತ್ಕಲ್ ಬಂಟರ ಸಂಘವು ಪ್ರತಿಯೊಂದು ಪ್ರದೇಶದಲ್ಲೂ ಒಳ್ಳೆಯ ಸಾಧನೆ ಮಾಡಿದೆ. ಪುಣೆಯಲ್ಲಿ ಎಲ್ಲಾ ಸದಸ್ಯ ಕಲಾವಿದರು ಉತ್ತಮ ಪ್ರದರ್ಶನ ನೀಡುವಂತಾಗಲಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಲೋಕಯ್ಯ ಶೆಟ್ಟಿ ಮುಂಚೂರು ಮಾತನಾಡಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸುರತ್ಕಲ್ ಬಂಟರ ಸಂಘಕ್ಕೆ ಒಳ್ಳೆಯ ಹೆಸರಿದೆ. ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡೋಣ ಎಂದರು.
ಮಾಜಿ ಅಧ್ಯಕ್ಷ ಉಲ್ಲಾಸ್ ಶೆಟ್ಟಿ ಮಾತನಾಡಿ ಒಂದು ಗಂಟೆಯ ಪ್ರದರ್ಶನಕ್ಕೆ ತುಂಬಾ ಶ್ರಮವಹಿಸ ಬೇಕಾಗುತ್ತದೆ. ಕಲಾವಿದರೆಲ್ಲರೂ ಶಿಸ್ತನ್ನು ಅಳವಡಿಸಿ ಪ್ರದರ್ಶನ ನೀಡಬೇಕು. ಮುಖ್ಯವಾಗಿ ಸಮಯದ ಪರಿಪಾಲನೆ ಅಗತ್ಯ ಎಂದರು.


ನಿರ್ದೇಶಕ ಗಿರೀಶ್ ಎಂ ಶೆಟ್ಟಿ ಕಟೀಲು ಮಾತನಾಡಿ, ಪುಣೆ ಬಂಟರ ಸಂಘದ ಸುವರ್ಣಮಹೋತ್ಸವಕ್ಕೆ ಯಾವುದಾದರೂ ನಾಟಕ ತಂಡವನ್ನು ಕರೆಸಿ ಪ್ರದರ್ಶನ ಕೊಡಿಸಬಹುದಿತ್ತು. ಆದರೆ ಪುಣೆ ಬಂಟರ ಸಂಘವು ಸುರತ್ಕಲ್ ಬಂಟರ ಸಂಘದ ಮೇಲೆ ವಿಶ್ವಾಸ ಇರಿಸಿ ಅವಕಾಶ ನೀಡಿದ್ದಾರೆ. ಈ ಅವಕಾಶವನ್ನು ಸದುಪಯೋಗ ಪಡಿಸಿ ಉತ್ತಮ ಪ್ರದರ್ಶನ ನೀಡ ಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದರು. ನಿರ್ದೇಶಕಿ ರಾಜೇಶ್ವರಿ ಡಿ ಶೆಟ್ಟಿಯವರು ಸಾಂಸ್ಜೃತಿಕ ಕಾರ್ಯಕ್ರಮದ ಸ್ವರೂಪವನ್ನು ತಿಳಿಸಿ, ಇದು ಎಲ್ಲರ ಜವಾಬ್ದಾರಿ, ಸಮಯ ಪರಿಪಾಲನೆ ಅಗತ್ಯ ಎಂದರು.
ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಕಾರ್ಯದರ್ಶಿ ಲೀಲಾದರ ಶೆಟ್ಟಿ, ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಜಯರಾಮ್ ಶೆಟ್ಟಿ, ಮಹಿಳಾ ಸಾಂಸ್ಕೃತಿಕ ಕಾರ್ಯದರ್ಶಿ ಸುಜಾತಾ ಹರೀಶ್ ಶೆಟ್ಟಿ, ಮಹಿಳಾ ವೇದಿಕೆ ಅಧ್ಯಕ್ಷ ಭವ್ಯಾ ಶೆಟ್ಟಿ, ಪ್ರವೀಣ್ ಶೆಟ್ಟಿ, ಕಿರಣ್ ಪ್ರಸಾದ್ ರೈ, ದಿವಾಕರ ಸಾಮಾನಿ ಚೇಳಾರ್, ದೇವೇಂದ್ರ ಶೆಟ್ಟಿ, ಮಾಧವ ಶೆಟ್ಟಿ ತಡಂಬೈಲ್, ರಮೇಶ್ ಶೆಟ್ಟಿ, ರಾಮಚಂದ್ರ ಶೆಟ್ಟಿ ತಡಂಬೈಲ್, ಅಕ್ಷಯ್ ಶೆಟ್ಟಿ, ಸುಕೇಶ್ ಶೆಟ್ಟಿ ಚೇಳಾರ್ ಮೊದಲಾದವರು ಉಪಸ್ಥಿತರಿದ್ದರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top